News Karnataka Kannada
Friday, May 10 2024
ಸಮುದಾಯ

ಮೈಸೂರಿನಲ್ಲಿ ಭಕ್ತಿಭಾವದ ಗುರುಪೂರ್ಣಿಮೆ ಆಚರಣೆ

Guru Purnima celebrated in Mysuru
Photo Credit : By Author

ಮೈಸೂರು: ನಗರದಲ್ಲೆಡೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗುರು ಪುರ್ಣಿಮೆಯನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು.

ಶಿಷ್ಯಂದಿರು ಗುರುವಿಗೆ ನಮನ ಸಲ್ಲಿಸಿದರೆ, ದೇವಸ್ಥಾನಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಧಾರ್ಮಿಕ ವಿಧಿವಿಧಾನದ ಮೂಲಕ, ಶಾಲಾ-ಕಾಲೇಜುಗಳಲ್ಲಿಯೂ ಸಂಭ್ರಮದಿಂದ ಗುರುಪೂರ್ಣಿಮೆ ಆಚರಿಸಲಾಯಿತು. ಹಿಂದೂ ಪಂಚಾಂಗದ ಪ್ರಕಾರ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸಿದರು.

ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಇತರ ದಿನಗಳಿಗಿಂತ ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಗುರು ಎಂದರೆ ಅಂಧಕಾರ ಅಥವಾ ಅಜ್ಞಾನ ದೂರ ಮಾಡುವವರು. ಹೀಗಾಗಿ ನಗರದ ವಿವಿಧ ಸಂಘ ಸಂಸ್ಥೆಗಳಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು. ಶಾಲಾ-ಕಾಲೇಜುಗಳಲ್ಲೂ ಗುರು ಸ್ಮರಣೆ ನಡೆಯಿತು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು. ವಿದ್ವಾಂಸರನ್ನು ಸ್ಮರಿಸುವ ಮೂಲಕ ಗುರು ಪೂರ್ಣಿಮೆ ಆಚರಿಸಲಾಯಿತು.

ತ್ಯಾಗರಾಜ ರಸ್ತೆಯಲ್ಲಿರುವ ಸಾಯಿಬಾಬಾ ಮಂದಿರ, ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

ಹೆಬ್ಬಾಳ್‌ನ ಸಿರಡಿ ಸಾಯಿ ಸೇವಾಶ್ರಮ ಟ್ರಸ್ಟ್, ರಾಮಕೃಷ್ಣ ನಗರದ ಶ್ರೀ ಪ್ರಸನ್ನ ಗಣಪ ಮತ್ತು ಶಿರಡಿ ಸಾಯಿ ಶಕ್ತಿ ಸನ್ನಿಧಿ ಚಾರಿಟಬಲ್ ಟ್ರಸ್ಟ್, ಮಹರ್ಷಿ ಪತಂಜಲಿ ಧ್ಯಾನ ಕೇಂದ್ರ, ಬೋಗಾದಿಯ ಶ್ರೀ ಯಾಜ್ಞವಲ್ಕತ್ರಯ ಶುಕ್ಲ ಯಜುರ್ವೇದ ಮಹಾಸಭಾದಿಂದ ಗುರುಪೂರ್ಣಿಮೆ ಆಚರಿಸಲಾಯಿತು.

ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ. ಪ್ರತಿಯೊಂದರ ಹಿಂದೆ ಗುರುವಿನ ಅವಶ್ಯಕತೆವಿದ್ದು, ಗುರುವಿನ ಆಶೀರ್ವಾದವಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ ಪ್ರಕಾಶ್ ಹೇಳಿದರು.

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಸುಶಮಿಂದ್ರತೀರ್ಥ ಸೇವಾ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತೀಯ ಪರಂಪರೆಯಲ್ಲಿ ಮಠಗಳ ಪಾತ್ರ ಅಮೋಘವಾಗಿದ್ದು, ಪ್ರತಿಯೊಂದು ಮಠಗಳಿಗೆ ಭಕ್ತರೇ ಆಧಾರ, ಧರ್ಮ, ಪರಂಪರೆ ಉಳಿಸಿಕೊಂಡು ಬರುವಲ್ಲಿ ಮಠಮಾನ್ಯಗಳ ಸೇವೆ ಅಮೋಘ. ಹೆತ್ತ ತಂದೆ ತಾಯಿ ಮತ್ತು ಗುರುವಿನ ಋಣ ತೀರಿಸಲು ಸಾಧ್ಯವಿಲ್ಲ ಎಂದರು.

ಸುಶಮಿಂದ್ರತೀರ್ಥ ಸೇವಾ ಸಮಿತಿ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ವರುಣ ಮಹದೇವ್, ಗೌರವಾಧ್ಯಕ್ಷ ಓಂಕಾರ್ ಆನಂದ್, ಕಾರ್ಯದರ್ಶಿ ಮಹದೇವ್, ಅರಮನೆ ಆಡಳಿತ ಮಂಡಳಿಯ ನಿರ್ದೇಶಕ ಸುಬ್ರಮಣ್ಯ, ಕೆಪಿಸಿಸಿ ಸದಸ್ಯ ನಜರ್‌ಬಾದ್ ನಟರಾಜ್, ಗಿರೀಶ್ ಗೌಡ, ಮಹದೇವ್, ಸಂತೋಷ್ ಶಂಭು, ಪರಮೇಶ್ ಗೌಡ, ರವಿಚಂದ್ರ, ಸಂದೀಪ್, ನವೀನ್, ಸುಬ್ಬಣ್ಣ ಇನ್ನಿತರರು ಭಾಗಿಯಾಗಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು