Categories: ಸಮುದಾಯ

ಕುಂದಾಪುರ: ಗ್ರಾಮೀಣ ಭಾಗದ ಜನರಿಗೆ ಸೇವಾ ಕಾರ್ಯಗಳು ಮುಟ್ಟಿರುವುದು ಖುಷಿಕೊಟ್ಟಿದೆ

ಕುಂದಾಪುರ: ಗ್ರಾಮೀಣ ಭಾಗದ ಜನರು ಕೂಡ ಲಯನ್ಸ್ ಕ್ಲಬ್ಬಿನ ಕಾರ್ಯ ಚಟುವಟಿ ಬಗ್ಗೆ ಮಾತನಾಡುತ್ತಿದ್ದಾರೆ ಸಾಮಾಜಿಕ ಸೇವಾ ಕಾರ್ಯಗಳು ಹಳ್ಳಿ ಜನರಿಗೆ ಮುಟ್ಟಿರುವುದು ಖುಷಿಕೊಟ್ಟಿದೆ ಮಾನವನು ಸಂಘ ಜೀವಿ ಆದಾಗ ಮಾತ್ರ ಜೀವನದಲ್ಲಿ ಅನುಭವಗಳನ್ನು ಅನುಭವಿಸಲು ಸಾಧ್ಯವಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಎಂ.ಕೆ.ಭಟ್ ಎಂಜೆಎಫ್ ಹೇಳಿದರು.

ನಾವುಂದ ಲಯನ್ಸ್ ಕ್ಲಬ್ಬ್ ವತಿಯಿಂದ ನಾವುಂದ ಅರೆಹೊಳೆ ಕ್ರಾಸ್ ಮಾಹಲಸಾ ಮಾಂಗಲ್ಯ ಹಾಲ್‍ನಲ್ಲಿ ನಡೆದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾಮಾನ್ಯ ಜನರು ಲಯನ್ಸ್ ಕ್ಲಬ್ಬಿನಲ್ಲಿ ಸೇರಿಕೊಂಡು ಅಶಕ್ತರ ಬಾಳಿಗೆ ನೆರವನ್ನು ನೀಡುತ್ತಿದ್ದಾರೆ ಸಾಮಾಜಿಕ ಕಾರ್ಯದ ಮೂಲಕ ಊರಿನ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ ಸಮಾಜ ಸೇವೆ ಮುಖೇನ ನಾವುಂದ ಕ್ಲಬ್ಬ್ ಟಾಪ್ 10 ರಲ್ಲಿ ಗುರುಸಿಕೊಂಡಿರುವುದು ಶ್ಲಾಘನೀಯ ಎಂದರು.

ಲಯನ್ಸ್ ಕ್ಲಬ್ ನಾವುಂದ ಅಧ್ಯಕ್ಷ ಜಗದೀಶ ಶೆಟ್ಟಿ ಕುದ್ರುಕೋಡು ಅಧ್ಯಕ್ಷತೆ ವಹಿಸಿ ಮಾತನಾಡಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿ ಆತ್ಮ ವಿಶ್ವಾಸದಿಂದ ಬದುಕಬಹುದು ಎಂದು ಹೇಳಿದರು.

ಫಸ್ಟ್ ವೈಸ್ ಡಿಸ್ಟ್ರಿಕ್ ನೇರಿ ಕರ್ನೆಲಿಯೋ,ಸೆಕೆಂಡ್ ವೈಸ್ ಡಿಸ್ಟ್ರಿಕ್ ಗವರ್ನರ್ ಮೊಹಮ್ಮದ್ ಹನಿಫ್ ಎಂಜೆಎಫ್,ರಿಜನ್ ಚೇರ್ ಪರ್ಸನ್ ಕಿರಣ್ ಕುಂದಾಪುರ, ಎಕ್ಸ್‍ಟೆನ್ಯನಲ್ ಚೇರ್ ಪರ್ಸನ್ ವಿಶ್ವನಾಥ ಶೆಟ್ಟಿ ಗಾಯಾಡಿ,ವಲಯಾಧ್ಯಕ್ಷ ನರಸಿಂಹ ದೇವಾಡಿಗ,ನಾವುಂದ ಕ್ಲಬ್ಬಿನ ಕಾರ್ಯದರ್ಶಿ ದಿನೇಶ್ ಆಚಾರ್ಯ,ಕೋಶಾಧಿಕಾರಿ ಸಮರ ಶೆಟ್ಟಿ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಜಗದೀಶ ಪೂಜಾರಿ ಹಕ್ಕಾಡಿ,ಭರತ ನಾಟ್ಯ ಕಲಾವಿದೆ ಶ್ವೇತಾ ರಾವ್ ಅರೆಹೊಳೆ,ಬಿ.ಬಿ.ಎ ಅಂತಿಮ ಪರೀಕ್ಷೆಯಲ್ಲಿ 2 ನೇ ಸ್ಥಾನ ಪಡೆದ ಶುಭಾಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು,8 ಜನ ಹೊಸ ಸದಸ್ಯರು ನಾವುಂದ ಕ್ಲಬ್ಬಿಗೆ ಸೇರ್ಪಡೆಗೊಂಡರು.ಜಗದೀಶ್ ಶೆಟ್ಟಿ ಸ್ವಾಗತಿಸಿದರು.ದಿನೇಶ್ ಆಚಾರ್ಯ ವರದಿ ವಾಚಿಸಿ ವಂದಿಸಿದರು.ಶಶಿಧರ ಶೆಟ್ಟಿ ನಿರೂಪಿಸಿದರು.

Ashika S

Recent Posts

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

4 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

17 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

23 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

27 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

42 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

47 mins ago