Categories: ಸಮುದಾಯ

ಕಡೇ ಆಷಾಢ ಶುಕ್ರವಾರದ ಪೂಜಾ ಕೈಂಕರ್ಯಗಳು ಸಂಪನ್ನ

ಮೈಸೂರು: ನಾಗಲಕ್ಷ್ಮೀ ಅಲಂಕಾರದೊಂದಿಗೆ ತಾಯಿ ಚಾಮುಂಡೇಶ್ವರಿ ನೆರೆದ ಸಹಸ್ರಾರು ಭಕ್ತರಿಗೆ ದರ್ಶನ ನೀಡಿದಳು. ಆ ಮೂಲಕ ಆಷಾಢ ಶುಕ್ರವಾರ ಸಂಪನ್ನಗೊಂಡಿದೆ.

ಆಷಾಢ ಮಾಸದ ಕಡೆಯ ಶುಕ್ರವಾರವಾದ ಹಿನ್ನಲೆಯಲ್ಲಿ ಈ ಬಾರಿ ಚಾಮುಂಡಿಬೆಟ್ಟಕ್ಕೆ ಮುಂಜಾನೆಯಿಂದಲೇ ತಾಯಿಯ ದರ್ಶನ ಪಡೆಯಲು ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ತೆರಳಿ ದರ್ಶನ ಪಡೆದರೆ, ಮಾಜಿ ಶಾಸಕರಾದ ಎಲ್.ನಾಗೇಂದ್ರ, ಅನಿತಾ ಕುಮಾರಸ್ವಾಮಿ, ಎಂಎಲ್‌ಸಿ ಶರವಣ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಕಡೆಯ ಆಷಾಢ ಶುಕ್ರವಾರವಾದ್ದರಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾತು. ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೊಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಕಳೆದ ಮೂರು ವಾರಗಳಂತೆ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ದೇವಸ್ಥಾನದ ಆವರಣ ಅಲಂಕೃತಗೊಂಡಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು. ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯ ದರ್ಶನ ಪಡೆದು ಹೊರಬರುತ್ತಿದ್ದ ಭಕ್ತರಲ್ಲಿ ಧನ್ಯತಭಾವ ಮೂಡಿತ್ತು.

ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದು ಬಂದಿತ್ತು. ಕೆಲವರು ಸಾರಿಗೆ ಬಸ್‌ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು.

Ashika S

Recent Posts

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

18 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

19 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

23 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

33 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

39 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

54 mins ago