Categories: ಸಮುದಾಯ

ಮೈಸೂರು: ಪಲಿಮಾರು ಶ್ರೀಗಳಿಂದ ಭಕ್ತರಿಗೆ ಮುದ್ರಾಧಾರಣೆ

ಮೈಸೂರು : ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆದಿದ್ದು, ಇದೇ ವೇಳೆ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡರು.

ಉಡುಪಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಭಕ್ತರಿಗೆ ಶಂಖ ಚಕ್ರಗಳ ಮುದ್ರಾಧಾರಣೆ ನೆರವೇರಿಸಿ ಮಾತನಾಡಿ ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಾಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಎನ್ನುವ ನಂಬಿಕೆ ಇದೆ. ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ. ಚಾತುರ್ಮಾಸ್ಯ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಶ್ರೀ ಕೃಷ್ಣಾ ಮಿತ್ರಮಂಡಳಿಯ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ತಂತ್ರಿ ಮಾತನಾಡಿ, ಪ್ರತಿವರ್ಷವೂ ನಾನಾಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆಯನ್ನು ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮವನ್ನು ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಿದರು.

ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ರಮೇಶ್, ಮಾಜಿ ಅಧ್ಯಕ್ಷರಾದ ಸುಬ್ರಹ್ಮಣ್ಯ ತಂತ್ರಿ ಹಾಗೂ ರವಿ ಶಾಸ್ತ್ರಿ, ಎಂ ಕೆ ಪುರಾಣಿಕ್, ಶ್ರೀ ವತ್ಸ, ಸುರೇಶ್ ಹಾಗೂ ಇನ್ನಿತರರು ಹಾಜರಿದ್ದರು.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago