News Karnataka Kannada
Monday, May 20 2024
ಸಮುದಾಯ

ಮಂಗಳೂರು: ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆಯಂದು ಶಾರದ ಪೂಜೆ

Photo Credit : News Kannada

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಇಂದು ಮಹಾತ್ಮಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತಿç ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಅಧ್ಯಾಪಕರ ತಂಡವು ಭಜನೆಯನ್ನು ನಡೆಸಿಕೊಟ್ಟಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಅಧ್ಯಾಪಕರಾದ ಶರಣಪ್ಪ ರವರು ಗಾಂಧೀಜಿ ಜಯಂತಿಯ ಮಹತ್ವವನ್ನು ವಾಚಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಿಂದ ಸರ್ವಧರ್ಮ ಪ್ರಾರ್ಥನೆ ನೆರವೇರಿತು.

ಇದೇ ಸಂದರ್ಭದಲ್ಲಿ ದಸರಾ ಹಬ್ಬದ ಪ್ರಯುಕ್ತ 7ನೇ ದಿನವಾದ ಭಾನುವಾರದಂದು ಶಾರದಾ ಪೂಜೆಯನ್ನು ಸರಸ್ವತಿ ಪ್ರತಿಮೆಯ ಮುಂಭಾಗದಲ್ಲಿ ನೆರವೇರಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ.ಸಿ ನಾಯಕ್, ಆಡಳಿತ ಮಂಡಳಿ ಸದಸ್ಯೆ ಶ್ರೀಮತಿ ಸಗುಣ ಸಿ. ನಾಯಕ್, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಪೃಥ್ವಿರಾಜ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರವನ್ನು ಕನ್ನಡ ಅಧ್ಯಾಪಕರಾದ ಶರಣಪ್ಪ ರವರು ನಿರೂಪಿಸಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು