News Karnataka Kannada
Wednesday, April 24 2024
Cricket
ಸಮುದಾಯ

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ ಗಿರಿಜಾ ಕಲ್ಯಾಣ ಮಹೋತ್ಸವ

ಶ್ರೀಕಂಠೇಶ್ವರಸ್ವಾಮಿ ದೇವಾಲಯ
Photo Credit : News Kannada

ನಂಜನಗೂಡು:  ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ ಗಿರಿಜಾ ಕಲ್ಯಾಣ ಮಹೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿತು.

ನದಿ ದಡದಲ್ಲಿ ನೆರೆದಿದ್ದ ಸಾವಿರಾರು ಭಕ್ತರು ಉತ್ಸವವನ್ನು ಕಣ್ತುಂಬಿಕೊಂಡರು. ಸಂಜೆ 7.30ಕ್ಕೆ ದೇವಸ್ಥಾನದಿಂದ ಶ್ರೀಕಂಠೇಶ್ವರಸ್ವಾಮಿ ಹಾಗೂ ಪಾವರ್ತಿದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ತಂದು ಕಪಿಲಾ ನದಿ ತೀರದಲ್ಲಿರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಪ್ರತಿಷ್ಠಾಪಿಸಿ ಶ್ರೀಕಂಠೇಶ್ವರಸ್ವಾಮಿ ದೇಗುಲದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್‌ ಮಾರ್ಗದರ್ಶನದಲ್ಲಿ ದೇವಾಲಯದ ಅರ್ಚಕರು ವಿಧ್ಯುಕ್ತವಾಗಿ ಪೂಜೆ ಸಲ್ಲಿಸಿದರು. ನಂತರ ವಿವಿಧ ಪುಷ್ಪಗಳು ಹಾಗೂ ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡಿದ್ದ ಯಾಂತ್ರಿಕ ದೋಣಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಪೂರ್ವ ಪಶ್ಚಿಮವಾಗಿ ಮೂರು ಸುತ್ತು ಪ್ರದಕ್ಷಿಣೆ ಹಾಕಿಸುವ ಮೂಲಕ ನದಿ ದಡದಲ್ಲಿ ನೆರೆದಿದ್ದ ಜನರಿಗೆ ತೆಪ್ಪೋತ್ಸವ ವೀಕ್ಷಿಸಲು ಅನುವು ಮಾಡಿಕೊಡಲಾಯಿತು.

ರಾತ್ರಿ 8.30ಕ್ಕೆ ಕಪಿಲಾ ನದಿಯ ದಡದಿಂದ ಉತ್ಸವ ಮೂರ್ತಿಯನ್ನು ವಾಪಸ್‌ ಹೊತ್ತು ತಂದು ದೇವಾಲಯದ ರಥ ಬೀದಿಯಲ್ಲಿ ಮೆರವಣಿಗೆ ಮಾಡಿ ಅನಂತರ ವಾಪಸ್‌ ದೇವಾಲಯಕ್ಕೆ ಕೊಂಡೊಯ್ಯಲಾಯಿತು. ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಉಪಸ್ಥಿತರಿದ್ದರು. ಗಿರಿಜಾ ಕಲ್ಯಾಣದ ಅಂಗವಾಗಿ ಮೂರು ದಿನಗಳ ಕಾಲ ಕಪಿಲಾ ನದಿಯಲ್ಲಿ ಜರುಗಲಿದ್ದು, ಮೊದಲ ದಿನವಾದ ಮಂಗಳವಾರ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು