Categories: ಸಮುದಾಯ

ಮಹಾಲಯ ಅಮಾವಾಸ್ಯೆ: ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ

ಚಾಮರಾಜನಗರ: ಜಿಲ್ಲೆಯ ಹನೂರು ತಾ| ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಅ.15 ರ ವರೆಗೆ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಆದೇಶಿಸಿದ್ದಾರೆ.

ಮಲೆ ಮಾದಪ್ಪನ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಮಾತ್ರವಲ್ಲದೆ, ಹೊರ ಜಿಲ್ಲೆಗಳಿಂದ ಮತ್ತು ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಾರೆ.

ಅಷ್ಟೇ ಅಲ್ಲದೆ, ದೇವಾಲಯಕ್ಕೆ ಹೋಗುವ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಹನೂರು ತಾಲೂಕಿನ ಮಲೈ ಮಹದೇಶ್ವರಬೆಟ್ಟಕ್ಕೆ ಜಾತ್ರೆಗಾಗಿ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಅ.15 ರ ಸಂಜೆ 7 ಗಂಟೆ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶಿಸಲಾಗಿದೆ.

Ashika S

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

3 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

15 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

26 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

35 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

48 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

59 mins ago