ಉಡುಪಿ: ವಕೀಲರ ಸಂಘದ ಆಶ್ರಯದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಉಡುಪಿ ವಕೀಲರ ಸಂಘದ ಕಚೇರಿಯಲ್ಲಿ ಆಯೋಜಿಸಲಾದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರಕ್ಕೆ ಇಂದು ಚಾಲನೆ ನೀಡಲಾಯಿತು.
ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು, ಜೀವನದ ಉದ್ದೇಶ ಸಫಲಗೊಳಿಸಲು ಆರೋಗ್ಯ ಸುಸ್ಥಿತಿಯಲ್ಲಿ ಇರುವುದು ಅಗತ್ಯ. ಇದಕ್ಕಾಗಿ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ ಎಂದರು.
ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿದರು.
ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೋನಾಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ವಕೀಲ ಮುಹಮ್ಮದ್ ಸುಹಾನ್ ಕಾರ್ಯಕ್ರಮ ನಿರೂಪಿಸಿದರು.