ಇತರೆ

ಭಾರತದ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಅಕೌಂಟ್ ಬ್ಯಾನ್ ಮಾಡಿದ ವಾಟ್ಸ್​ಆ್ಯಪ್ !

ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್​ಆ್ಯಪ್ ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ.
ವಾಟ್ಸ್​ಆ್ಯಪ್​ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.

ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.

Sneha Gowda

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

1 min ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

16 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

38 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

40 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

57 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago