News Karnataka Kannada
Saturday, April 20 2024
Cricket
ವಿಶೇಷ

ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ: ಸಹಪಾಠಿಗಳಂತೂ ಪುಲ್ ಕನ್ಫ್ಯೂಸ್

5 pairs of twins in the same class: Classmates are confused
Photo Credit : News Kannada

ಬಂಟ್ವಾಳ:  ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದು, 5ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದು ಆಶ್ಛರ್ಯ ಎಂಬಂತೆ ಒಂದೇ ಶಾಲೆಯ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಅವಳಿ ಜವಳಿ ಮಕ್ಕಳು ಹೆಚ್ಚಾಗಿ ರೂಪದಲ್ಲಿ ಮತ್ತು ಚಟುವಟಿಕೆಯಲ್ಲಿ ಒಂದೇ ಸಮನಾಗಿರುವುದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೆಲವೊಮ್ಮೆ ತಬ್ಬಿಬ್ಬಗುವ ಪ್ರಸಂಗಗಳು ನಡೆಯುತ್ತಿರುತ್ತದೆ. ಒಮ್ಮೊಮ್ಮೆ ಸಹಪಾಠಿಗಳು ಪೂಲ್ ಆಗುವ ಸಂದರ್ಭಗಳು ಕೂಡ ಬಂದಿವೆಯಂತೆ.
ಒಂದಿಬ್ಬರು ವಿದ್ಯಾರ್ಥಿಗಳು ಒಂದೇ ತರಗತಿಯಲ್ಲಿ ಕಂಡು ಬಂದಿರುವ ಸಂಗತಿಗಳು ಬೆಳಕಿಗೆ ಬಂದಿವೆ.

ಜಿಲ್ಲೆಯ ಬೇರೆ ಬೇರೆ ಶಾಲೆಗಳಲ್ಲಿ ಈ ರೀತಿಯ ಅವಳಿ ಜವಳಿ ಮಕ್ಕಳ ಬಗ್ಗೆ ವರದಿಯಾಗಿದೆ. ಆದರೆ ಬಂಟ್ವಾಳ ತಾಲೂಕಿನಲ್ಲಿ ಬಹುಶಃ ಇದೇ ಮೊದಲ ಶಾಲೆಯಾಗಿರಬೇಕು.

ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎಂಬುದನ್ನು ಉಲ್ಲೇಖ ಮಾಡಬೇಕಾಗುತ್ತದೆ. ಏನೇ ಇರಲಿ ಜತೆಯಾಗಿರುವ ಈ ವಿದ್ಯಾರ್ಥಿಗಳು ಶಾಲೆಗೆ ಕೀರ್ತಿಯನ್ನು ತಂದುಕೊಡಲಿ ಎಂಬುದೇ  ಆಶಯ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು