News Karnataka Kannada
Friday, April 19 2024
Cricket
ವಿಶೇಷ

ವೈದ್ಯರ ದಿನಾಚರಣೆ: ರೋಗಿಗಳ ಕಾಪಾಡುವ ವೈದ್ಯರಿಗೊಂದು ಸಲಾಮ್

Doctors
Photo Credit : News Kannada

ಜು.1 ಎಲ್ಲೆಡೆ ವೈದ್ಯರ ದಿನವನ್ನು ಆಚರಿಸಲಾಗುತ್ತಿದೆ. ಇದು ಭಾರತರತ್ನ ಡಾ.ಬಿದನ್ ಚಂದ್ರ ರಾಯ್ ಅವರ ಜನ್ಮ ದಿನವಾಗಿದೆ. ಅವರ ಜನ್ಮದಿನವನ್ನು ಭಾರತದಲ್ಲಿ ವೈದ್ಯರ ದಿನಾಚರಣೆಯನ್ನಾಗಿ ಆಚರಿಸಲು ಕಾರಣವೇನು ಎಂಬುದನ್ನು ನೋಡುತ್ತಾ ಹೋದರೆ ಅವರ ಸಾಧನೆಯ ಕಥೆ ತೆರೆದು ಕೊಳ್ಳುತ್ತಾ ಹೋಗುತ್ತದೆ.

ಹಾಗೆನೋಡಿದರೆ ವೈದ್ಯರ ದಿನಾಚರಣೆಯನ್ನು ಭಾರತದಲ್ಲಿ ಜುಲೈ 1ರಂದು ಆಚರಿಸಿದರೆ, ಅಮೆರಿಕದಲ್ಲಿ ಮಾರ್ಚ್ 30ರಂದು ವೈದ್ಯ ದಿನಾಚರಣೆಯನ್ನು ಆಚರಿಸುತ್ತಾರೆ. ಏಕೆಂದರೆ ಮಾರ್ಚ್, 30-1842 ರಂದು ಡಾ.ಕ್ರಾಫರ್ಡ್ ಡಬ್ಲ್ಯು ಲಾಂಗ್ ಎನ್ನುವವರು ಮೊದಲ ಬಾರಿಗೆ ಅರಿವಳಿಕೆಯನ್ನು (ಅನೆಸ್ತೀಸಿಯ) ಪರಿಣಾಮಕಾರಿಯಾಗಿ ಬಳಸಿ ಒಂದು ಶಸ್ತ್ರಚಿಕಿತ್ಸೆಯನ್ನು ಮಾಡಿದರಂತೆ ಈ ಮಹತ್ವದ ದಿನವನ್ನು ಅವರು ರಾಷ್ಟ್ರೀಯ ವೈದ್ಯ ದಿನಾಚರಣೆಯನ್ನಾಗಿ ಆಚರಿಸುತ್ತಿದ್ದಾರೆ.  ಅಂದು ಅಲ್ಲಿ ರೋಗಿಗಳು ಮತ್ತು ಸಾರ್ವಜನಿಕರು  ವೈದ್ಯರಿಗೆ  ಪ್ರೀತಿ, ತ್ಯಾಗ, ಧೈರ್ಯ, ಸಾಹಸ ಹಾಗೂ ಸೇವೆಯ ಪ್ರತೀಕವಾದ ಕೆಂಪು ಗುಲಾಬಿ ಹೂವು ನೀಡಿ ಶುಭಾಶಯ

ಇನ್ನು ಭಾರತದಲ್ಲಿ ಜುಲೈ1ನ್ನು ವೈದ್ಯರ ದಿನಾಚರಣೆಯನ್ನಾಗಿ ಆಚರಿಸುವುದರ ಹಿಂದೆ ಹಲವು ಮಹತ್ವದ ಸಂಗತಿಗಳಿವೆ. ಅದು ಮೇಲ್ನೋಟಕ್ಕೆ ಡಾ.ಬಿದನ್ ಚಂದ್ರ ರಾಯ್ ಅವರ ಜನ್ಮದಿನವಾದರೂ ಆ ದಿನವನ್ನು ಆಯ್ಕೆ ಮಾಡಿಕೊಳ್ಳಲು ಹಲವು ಕಾರಣಗಳಿವೆ. ಡಾ.ಬಿದನ್ ಚಂದ್ರ ರಾಯ್ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಾಹಾತ್ಮ ಗಾಂಧೀಜಿಯವರ ಖಾಸಗಿ ವೈದ್ಯರೂ ಹೌದು. ಅವರು ಲಂಡನ್ನಿನಿಂದ ಎಫ್.ಆರ್.ಸಿ.ಎಸ್ ಹಾಗೂ ಎಂ.ಆರ್.ಸಿ.ಪಿ ಪದವಿಗಳೆರಡನ್ನೂ ಪಡೆದ ತಜ್ಞವೈದ್ಯ, ಶಸ್ತ್ರಚಿಕಿತ್ಸಕರಾಗಿದ್ದದ್ದು ಮತ್ತೊಂದು ವಿಶೇಷ. ಇವರು ಅನೇಕ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವುದರೊಂದಿಗೆ  ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾಗಿ ಜನಸೇವೆಯೊಂದಿಗೆ ಪ್ರತಿ ದಿನ ಸುಮಾರು 2 ಗಂಟೆಗಳ ಕಾಲ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುತ್ತಿದ್ದರು ಎಂದರೆ ಅಚ್ಚರಿಯಾಗುತ್ತದೆ.

ಇಂತಹ ಮಹಾನ್ ವ್ಯಕ್ತಿ ಜುಲೈ 1, 1882ರಲ್ಲಿ ಜನಿಸಿ ಜುಲೈ 1, 1962ರಂದು ವಿಧಿವಶರಾದರು. ಆದರೆ ಅವರು ಜುಲೈ 1ರಂದು ಜನಿಸಿ, ಜುಲೈ 1ರಂದೇ ಇಹಲೋಕ ತ್ಯಜಿಸಿದ್ದು ವಿಶೇಷ. ಅವರ ನೆನಪು ಚಿರವಾಗಿರಲೆಂದೇ ವೈದ್ಯರ ದಿನಾಚರಣೆ ರೂಢಿಗೆ ಬಂದಿದೆ.

ಇವತ್ತು ವೈದ್ಯಲೋಕ ಅಗಾಧವಾಗಿ ಬೆಳೆದಿದೆ. ಹೈಟೆಕ್ ಚಿಕಿತ್ಸೆ ನೀಡುವ ವೈದ್ಯರು ಮತ್ತು ಆಸ್ಪತ್ರೆಗಳು ಒಂದೆಡೆಯಾದರೆ, ಬಡ, ಅನಾಥ, ವೃದ್ಧಾಶ್ರಮಗಳಿಗೆ ತೆರಳಿ ಚಿಕಿತ್ಸೆ ನೀಡುವವರು ಹಾಗೂ ರೋಗಿಗಳಿಗೆ ಹೊರೆಯಾಗದಂತೆ ಆರೋಗ್ಯ ಸೇವೆ ನೀಡುವ  ಜನಾನುರಾಗಿ ವೈದ್ಯರೂ ನಮ್ಮೊಂದಿಗೆ ಇದ್ದಾರೆ ಎನ್ನುವುದು ಸಂತಸದ ವಿಚಾರವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು