Categories: ಅಂಕಣ

ಜೀರ್ಣಕ್ರಿಯೆ ಉತ್ತಮವಾಗಿದ್ದಲ್ಲಿ ಅಲರ್ಜಿಯಿಂದ ದೂರವಿರಬಹುದು

ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರನ್ನು ಕಾಡುವ ಸಮಸ್ಯೆಯೆಂದರೆ ಅಲರ್ಜಿ ಅದರಲ್ಲೂ ಸೀನುವಿಕೆ, ಬೆಳಂಬೆಳಗ್ಗೆ ಎದ್ದ ಕೂಡಲೇ ಸುಮಾರು ಹತ್ತರಷ್ಟು ಸೀನುವುದು ಸಾಮಾನ್ಯವಾಗಿ ಹೆಚ್ಚಿನ ಜನರಲ್ಲಿ ಕಾಣಸಿಗುತ್ತದೆ. ಇದಕ್ಕೆ ಕಾರಣಗಳು ಬಹಳ ಇವೆ.

ಸಾಧಾರಣವಾಗಿ ನಮ್ಮ ದೇಹದ ಜೀರ್ಣಕ್ರಿಯೆಯೂ ದೇಹದಲ್ಲಾಗುವ ಪ್ರತಿ ಬದಲಾವಣೆಗೆ ಕಾರಣವಾಗಿರುತ್ತದೆ. ಜೀರ್ಣಕ್ರಿಯೆಯೂ ಉತ್ತಮವಾಗಿದ್ದರೆ ಇಂತಹ ಸಮಸ್ಯೆಗಳಿಂದ ದೂರವಿರಬಹುದು. ಎನ್ನುತ್ತಾರೆ ಮೂಡಬಿದ್ರೆಯ ಕಾಕುಂಜೆ ವೆಲ್ ನೆಸ್ ಕ್ಲಿನಿಕ್ ನ ವೈದ್ಯ ಡಾ. ಅನುರಾಧ.

ಆಯುರ್ವೇದದ ಪ್ರಕಾರ ನಮ್ಮ ಇಡೀ ದೇಹವು ಒಂದೇ ಮುಖ್ಯ ಭಾಗವಾಗಿ ತನ್ನ ಪ್ರತಿ ಕೆಲಸವನ್ನೂ ಮಾಡುತ್ತದೆ.ಅದೇ ರೀತಿ ನಮ್ಮ ಜೀರ್ಣಕ್ರಿಯೆಯೂ ಒಂದಕ್ಕೊಂದು ಪೂರಕವಾಗಿ ಕಾರ್ಯವನ್ನು ಮಾಡುತ್ತದೆ.

ಸಾಮಾನ್ಯವಾಗಿ ಈ ಸೀನುವಿಕೆ ಅಲರ್ಜಿಯೂ ನಮ್ಮ ದೇಹದ ಜೀರ್ಣಕ್ರಿಯೆಗೆ ಸಂಬಂಧಿಸಿದ ವ್ಯವಸ್ಥೆ ಸರಿಯಾಗಿ ಕೆಲಸ ಮಾಡದೆ ಇದ್ದಾಗ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಸಿವಿಲ್ಲದಿರುವುದು ಹೊಟ್ಟೆ ಉಬ್ಬರ ಗಳಂತಹ ಸಮಸ್ಯೆ ಇದ್ದರೆ ಸೀನುವಿಕೆ ಅಲರ್ಜಿ ಕಾಣಸಿಗುತ್ತದೆ.

ಮೊದಲನೇದಾಗಿ ಇಂತಹ ಸಮಸ್ಯೆಗೆ ಔಷಧಿ ತೆಗೆದುಕೊಳ್ಳುವ ಮೊದಲು ಈ ಸಮಸ್ಯೆಯು ಯಾವುದರಿಂದ ಬಂದಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎನ್ನುತ್ತಾರೆ ಡಾ. ಅನುರಾಧ.ಅದೇ ರೀತಿ ಸಮಸ್ಯೆಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಈ ಸಮಸ್ಯೆಗೆ ಯಾವುದೇ ರೀತಿಯ ಔಷಧಿ ಸೇವನೆ ಮಾಡಿದರು ಸಮಸ್ಯೆ ಕಡಿಮೆಯಾಗದೇ ಇರುವುದಕ್ಕೆ ‌ಮುಖ್ಯ ಕಾರಣವೇ ಅದರ ‌ಮೂಲ ಸಮಸ್ಯೆಯನ್ನು ತಿಳಿದುಕೊಳ್ಳದೆ ಇರುವುದು.ಆಯುರ್ವೇದದ ಚಿಕಿತ್ಸೆಯಲ್ಲಿ ಈ ಸಮಸ್ಯೆಯನ್ನು ನಸ್ಯ ಚಿಕಿತ್ಸೆಯಿಂದ ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಬಹುದು. ಸ್ವಲ್ಪಮಟ್ಟಿಗೆ ಕಡಿಮೆ ಮಾಡಿಕೊಳ್ಳಬಹುದು. ರೋಗನಿರೋಧಕ ಶಕ್ತಿ ಹೆಚ್ಚಲು ಚವನ್ ಪ್ರಶ್ ಲೇಹ ವೈದ್ಯರ ಸಲಹೆ ಮೇರೆಗೆ ಸೇವಿಸುವುದರಿಂದಲೂ ಸಮಸ್ಯೆಯಿಂದ ದೂರವಿರಬಹುದು ಎನ್ನುತ್ತಾರೆ.

 

 

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago