ಬೆಳೆಗಳ ಮಾಹಿತಿ ಅಪ್ ಲೋಡ್ ಗೆ ರೈತರಿಗೆ ಸಲಹೆ

ಚಾಮರಾಜನಗರ: 2021-22ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯು ಮಾರ್ಚ್ 17ರಿಂದ ಆರಂಭಗೊಂಡಿದೆ. ಕಳೆದ ವರ್ಷದಂತೆ ಈ ವರ್ಷವೂ ಸಹ ರೈತರು ತಮ್ಮ ಜಮೀನುಗಳ ಸರ್ವೆ ನಂ, ಹಿಸ್ಸಾ ನಂಬರ್‌ ವಾರು ತಾವು ಬೆಳೆದ ಕೃಷಿ ಬೆಳೆಗಳ ಹಾಗೂ ತಮ್ಮ ಜಮೀನಿನಲ್ಲಿರುವ ಬಹುವಾರ್ಷಿಕ ತೋಟಗಾರಿಕೆ, ಅರಣ್ಯ, ಇತರೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ತಮ್ಮ ಅಂಡ್ರ್ಯಾಡ್ ಮೊಬೈಲ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಬೇಸಿಗೆ ರೈತರ ಬೆಳೆ ಸಮೀಕ್ಷೆ ಆಪ್ 2021-22 ಆಪ್ ನ್ನು ಲಿಂಕ್ ಬಳಸಿ ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನಮೂದಿಸಬಹುದಾಗಿದೆ.

ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ ಬೆಳೆ ವಿಮೆ ಯೋಜನೆಯ ಸರ್ವೆ ನಂ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ್ ಆಯ್ಕೆ ಮಾಡಲು ಅನುಕೂಲವಾಗಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎನ್.ಡಿ.ಆರ್.ಎಫ್ ಮತ್ತು ಎಸ್.ಟಿ.ಆರ್.ಎಫ್. ನಡಿ ಸಹಾಯಧನ ನೀಡಲು ಅಂದರೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸುವಲ್ಲಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಸಿದ್ದಪಡಿಸಲಾಗುತ್ತದೆ.

ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೇಸಿಗೆ ರೈತರ ಬೆಳೆ ಸಮೀಕ್ಷೆ ಆಪ್ 2021-22 ನಲ್ಲಿ ನಮೂದಿಸಲು ಕೋರಲಾಗಿದೆ. ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಯ ಮಾಹಿತಿಯನ್ನು ಖಾಸಗಿ ನಿವಾಸಿಗಳ (ಪಿ.ಆರ್) ಸಹಾಯದಿಂದಲೂ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಛಾಯಾ ಚಿತ್ರದೊಂದಿಗೆ ಬೇಸಿಗೆ ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ನಮೂದಿಸಬಹುದಾಗಿದೆ.

Swathi MG

Recent Posts

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

7 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

8 hours ago

ಒಂದೇ ದಿನ ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಧಾನಿ ಮೋದಿ, ಪ್ರಿಯಾಂಕ ಅಬ್ಬರ

ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ ಇಂದು ಬೆಳಗಾವಿಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ…

8 hours ago

ಮೆಂಟಲ್ ಸೂರಿ ಹತ್ಯೆ ಕೇಸ್‌ : ಮೃತನ ಮಗನೂ ಸೇರಿ ಮೂವರ ಬಂಧನ

ಜಿಲ್ಲೆಯಲ್ಲಿ ಮನೆ ಕಳ್ಳತನ, ದರೋಡೆ ಕಿಂಗ್‌ ಎನಿಸಿಕೊಂಡಿದ್ದ ಸುರೇಶ್ ಅಲಿಯಾಸ್ ಮೆಂಟಲ್ ಸೂರಿ(45)ಯನ್ನ ಶಿವಮೊಗ್ಗ ಬಾಪೂಜಿನಗರದ 7ನೇ ಕ್ರಾಸ್ ನಲ್ಲಿರುವ…

9 hours ago

ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ…

9 hours ago

ಅಕ್ರಮ ಜಾನುವಾರು ಸಾಗಾಟ: 9 ಆರೋಪಿಗಳು ಪೊಲೀಸರ ವಶಕ್ಕೆ

ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಆರೋಪಿಗಳು ಖರೀದಿಸಿ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಗಂಗಾವತಿ…

10 hours ago