News Karnataka Kannada
Sunday, April 28 2024
ಅಂಕಣ

“ಲೈಫ್ ಈಸ್ ಬ್ಯೂಟಿಫುಲ್” ಓದಿದರೆ ಲೈಫ್ ಆಗುವುದು ಕಲರ್ಫುಲ್

Sneha Life Is Beautiful
Photo Credit :

ಲೈಫ್ ಈಸ್ ಬ್ಯೂಟಿಫುಲ್ ಕಣ್ಣ್ ಬಿಟ್ಟ್ ನೋಡ್ರೀ” ಜೋಗಿ ಅವರ ಸದಭಿರುಚಿಯ ಬರಹಗಳ ಸಂಕಲನ. ಜೋಗಿಯವರು ಬರೆಯುವ ಪುಸ್ತಕಗಳಲ್ಲಿ ನಮ್ಮ ಬದುಕು ಭಾವಗಳನ್ನು ಒಳಗೊಂಡಿರುವ ಸಹಜ ಸ್ಥಿತಿ ಗತಿಗಳ ಹಿನ್ನೆಲೆಯನ್ನು ಚಿತ್ರಣಗಳಲ್ಲಿ ತೋರಿಸಿರುವರು. ಜೋಗಿ ನಮ್ಮ ಅಂತರಾಳವನ್ನು ತಮ್ಮ ಪದಗಳಲ್ಲಿ ಹೇಳುತ್ತಾರೆ. ಅದೇ ಜೋಗಿ ಅವರ “ಲೈಫ್ ಈಸ್ ಬ್ಯೂಟಿಫುಲ್” ಪುಸ್ತಕ. ಇಲ್ಲಿ ಯಾವುದೇ ಕಥೆಯಿಲ್ಲ, ಕಾದಂಬರಿಯೂ ಅಲ್ಲ, ಪಾತ್ರಗಳು ಸಹ ಇಲ್ಲ. ಇಲ್ಲಿ ತುಂಬಿರುವುದೆಲ್ಲ ನಾವು ಮತ್ತು ನಮ್ಮ ಬದುಕು ಮಾತ್ರ.

ಈ ಪುಸ್ತಕದಲ್ಲಿ ಬರೆದಿರುವ ಮುನ್ನುಡಿ ವಿಶೇಷವಾದ್ದು ಎಲ್ಲರು ಮೆಚ್ಚಿಕೊಳ್ಳುವ ಹಾಗಿದೆ “ಇವತ್ತು ನಾನು ಎಂಥಾ ಪುಸ್ತಕ ಕೊಟ್ಟರೂ ಓದಬಲ್ಲೆ. ಎಂಥಾ ಕಳಪೆ ಪುಸ್ತಕದಲ್ಲೂ ನನಗೆ ಬೇಕಾದ ಒಂದು ಸಾಲು ಸಿಕ್ಕೇ ಸಿಗುತ್ತದೆ ಎಂದು ನಂಬಿದವನು ನಾನು. ಎಂಥಾ ಕಸದ ತೊಟ್ಟಿಗೆ ಎಸೆದರೂ ಅಲ್ಲಿಂದ ಒಂದೆರಡು ಉಪಯುಕ್ತ ವಸ್ತುಗಳನ್ನು ಹೆಕ್ಕಬಹುದು ಎಂಬುದು ನನ್ನ ಭರವಸೆ.” ಲೇಖಕರ ಈ ಮಾತುಗಳು ಎಷ್ಟೋ ಸಲ ಸತ್ಯವೆನಿಸಿದೆ, ಏಕೆಂದರೆ ಪ್ರತೀ ಬೇಸರ, ನೋವು, ಒಂಟಿತನ, ಯಾರೊಂದಿಗೂ ಹೇಳಿಕೊಳ್ಳಲಾಗದ ನೀರಸ ಮನಸ್ಥಿತಿಯನ್ನು ದೂರ ಮಾಡುವ ಶಕ್ತಿಯಿರುವುದು ಪುಸ್ತಕಳೊಂದಿಗಿರುವ ಗಾಢವಾದ ಸ್ನೇಹವೆಂಬುದು ನನ್ನ ನಂಬಿಕೆ.

ಇನ್ನೊAದು ವಿಶೇಷವೆಂದರೆ ಲೇಖಕರೂ ಓದುಗರಿಗೆ ಈ ಪುಸ್ತಕ ಓದಲು ಕೆಲವೊಂದು ಷರತ್ತುಗಳನ್ನು ಹಾಕಿರುವರು. ದಿನಕ್ಕೆ ಹತ್ತು ಗಂಟೆಗಿAತಲೂ ಹೆಚ್ಚು ಫೋನಲ್ಲಿ ಮಾತಾಡುವವರು. ದಿನವಡೀ ಫೇಸ್ ಬುಕ್ ನೋಡುತ್ತಾ ಕೂತಿರುವವರು. ಮಾತಿಗಂತ ವಾಟ್ಸ್ ಆಪ್ ಉತ್ತಮ ಎಂದು ನಂಬಿದವರು. ಸಿನಿಮಾ ಹಾಡುಗಳೇ ಜೀವನದ ಸರ್ವಸ್ವ ಎಂದುಕೊAಡಿರುವವರು ದಯವಿಟ್ಟು ಈ ಪುಸ್ತಕವನ್ನು ಓದಬೇಡಿ ಎಂದು ಹೇಳಿದ್ದಾರೆ.

ಈ ಷರತ್ತುಗಳನ್ನು ಓದಿದ ನಂತರ ಅನಿಸಿತು ಅವರು ಹೇಳಿದಷ್ಟು ಸಮಯವಲ್ಲದಿದ್ದರೂ ಸ್ವಲ್ಪ ಹೊತ್ತಾದರೂ ನಾವು ಕೆಲವೊಮ್ಮೆ ಮೇಲಿನ ಈ ಷರತ್ತುಗಳಲ್ಲಿ ಭಾಗಿಯಾಗಿದ್ದೇವೆಂದು. ಈಗಿನ ದಿನಗಳಲ್ಲಿ ವಾಟ್ಸಾಪ್ ಮತ್ತು ಫೇಸ್ಬುಕ್ ಜೀವನದ ಅವಿಭಾಜ್ಯ ಅಂಗಗಳೇನೋ ಎನ್ನುವ ಮಟ್ಟಿಗೆ ನಾವು ಹಚ್ಚಿಕೊಂಡಿದ್ದೇವೆ, ಈಗಾಗಲೇ ಅವೆರೆಡು ಇಲ್ಲದಿದ್ದರೆ ಜೀವನವೇ ಇಲ್ಲ ಎನ್ನುವ ಮಟ್ಟವನ್ನು ಸುಮಾರು ಜನ ತಲುಪಿದ್ದಾರೆ. ಆದರೆ ಇದರಾಚೆಗೂ ಬದುಕಿದೆ, ಸಂತೋಷವಿದೆ, ನೆಮ್ಮದಿಯಿದೆ ಎಂದು ಈ ಪುಸ್ತಕ ಓದಿದರೇ ತಿಳಿಯುತ್ತದೆ. ಏಕೆಂದರೆ ಇಲ್ಲಿ ಸ್ನೇಹ, ಪ್ರೇಮ, ಗುರು ಶಿಷ್ಯ, ಸಿಟ್ಟು, ಒಂಟಿತನ , ನೋವು ನಲಿವು ಹೀಗೆ ಒಬ್ಬ ಮನುಷ್ಯನ ಜೀವನದಲ್ಲಿ ಏನೇನು ಸಮಸ್ಯೆ ಬರಬಹುದೋ, ಯಾವೆಲ್ಲ ವ್ಯಕ್ತಿಗಳು ಬರಬಹುದೋ, ಏನೆಲ್ಲಾ ಮನಸ್ಥಿತಿಗಳನ್ನು ತಲುಪಬಹುದೋ, ಹಾಗೆ ಬರೀ ಪ್ರಶ್ನೆಗಳೇ ತುಂಬಿಕೊAಡು ಹೇಗೆಲ್ಲ ಉತ್ತರಗಳ ಹುಡುಕಾಟ ನಡೆಸಬಹುದೋ, ಹೀಗೆ ಹತ್ತು ಹಲವಾರು ವಿಷಯಗಳು ಬಂದು ಹೋಗುತ್ತವೆ.

ಈ ಪುಸ್ತಕವು ಸಮಸ್ಯೆಗಳ ಸುತ್ತ ಸುತ್ತದೆ, ಪ್ರಶ್ನೆಗಳ ಹಿಂದೆಯೇ ಓಡದೆ, ಇರುವ ಚಿಕ್ಕ ಚಿಕ್ಕ ಸಂತೋಷವನ್ನೇ ಅನುಭವಿಸಿ, ಯಾವುದೇ ಕ್ಷಣವನ್ನು ವ್ಯರ್ಥ ಮಾಡದೇ ಬದುಕಿನ ಸಮಸ್ಯೆಯ ಜೊತೆ ಶಾಂತವಾಗಿ ಯೋಚಿಸಿದರೆ ಪೂರ್ತಿ ಪರಿಹಾರ ಸಿಗದಿದ್ದರೂ ಸ್ವಲ್ಪ ನೆಮ್ಮದಿಯ ಹಾದಿಯಂತೂ ಸಿಕ್ಕೇ ಸಿಗುತ್ತದೆ ಎನ್ನುವ ಅಂಶ. ನೆಮ್ಮದಿಗೆ, ಯಶಸ್ಸಿಗೆ ಯಾರನ್ನೂ ನೆನೆಯದೇ ನಾವೇ ಎಲ್ಲ ದಾರಿ ಕಂಡುಕೊಳ್ಳಬಹುದು ಎಂದು ಈ ಪುಸ್ತಕ ಓದಿದಮೇಲೆ ತಿಳಿಯುತ್ತದೆ. ನಿಜಕ್ಕೂ “ಲೈಫ್ ಈಸ್ ಬ್ಯೂಟಿಫುಲ್” ಓದಿದರೆ ಲೈಫ್ ಆಗುವುದು ಕಲರ್ಫುಲ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
4383

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು