Categories: ಅಂಕಣ

ಹೇರ್ ಸ್ಟ್ರೈಟ್ನಿಂಗ್ ಮಾಡುವ ಮುನ್ನ ಅಡ್ಡ ಪರಿಣಾಮಗಳ ಬಗ್ಗೆ ಅರಿವಿರಲಿ

ಈಗ ಜನರು ಬದಲಾವಣೆಯತ್ತ ಹೆಚ್ಚು ಆಸಕ್ತಿ ತೋರುತ್ತದ್ದಾರೆ. ಹೇಗೆ ಹೊಸ ಹೊಸ ಟ್ರೆಂಡ್ ಗಳು ಬರುತ್ತಾ ಇದೆಯೊ ಜನರು ಅತೀ ಬೇಗ ಅತ್ತ ಒಲವು ತೋರುತ್ತಿದ್ದಾರೆ. ಇದು ಕೇವಲ ನಾವು ಧರಿಸುವ ಬಟ್ಟೆಗಳಿಗೆ ಮಾತ್ರ ಸೀಮಿತವಾಗದೆ ಮೇಕಪ್, ಕೂದಲು ವಿನ್ಯಾಸಕ್ಕೂ ಆವರಿಸಿಕೊಂಡಿದೆ. ಅದರಲ್ಲೂ ಈಗ ಕೂದಲನ್ನು ಭಿನ್ನ ಭಿನ್ನ ಶೈಲಿಯಲ್ಲಿ ಹೇರ್ ಸ್ಟೈಲ್ ಮಾಡುವುದು, ಹೇರ್ ಸ್ಟ್ರೈಟ್ನಿಂಗ್ ಮಾಡುವುದು, ಹೇರ್ ಕಲರಿಂಗ್ ಮಾಡುವುದು ಸಾಮಾನ್ಯವಾಗಿ ಬಿಟ್ಟಿದೆ.

ಈಗಂತು ಹೆಚ್ಚಿನವರು ತಮ್ಮ ಕೂದಲು ನೈಸ್ ಆಗಿ ಇರಬೇಕೆಂದು ಆಸೆ ಪಡುತ್ತಾರೆ. ಅದಕ್ಕಾಗಿ ಹೇರ್ ಸ್ಟ್ರೈಟ್ನಿಂಗ್ ನ ಮೊರೆ ಹೋಗುವುದು ಸರ್ವೇಸಾಮಾನ್ಯವಾಗಿದೆ. ಹೇರ್ ಸ್ಟ್ರೈಟ್ನಿಂಗ್ ನಿಂದ ಕೂದಲು ಬಹಳ ನಾಜೂಕಾಗಿ, ಸುಂದರವಾಗಿ ಕಾಣಿಸಿಕೊಳ್ಳುತ್ತದೆ.

ಇನ್ನು ಸ್ಟ್ರೈಟ್ನಿಂಗ್ ನಲ್ಲಿ ಎರಡು ವಿಧವಿದೆ. ಒಂದು ತಾತ್ಕಾಲಿಕ ಸ್ಟ್ರೈಟ್ನಿಂಗ್ ಇನ್ನೂಂದು ಪರ್ಮನೆಂಟ್ ಸ್ಟ್ರೈಟ್ನಿಂಗ್ ಮಾಡಿಸುವುದು. ಪರ್ಮನೆಂಟ್ ಹೇರ್ ಸ್ಟ್ರೈಟ್ನಿಂಗ್ ಮಾಡುವ ಮುನ್ನ ತಾತ್ಕಾಲಿಕ ಹೇರ್ ಸ್ಟ್ರೈಟ್ನಿಂಗ್ ಮಾಡಿ ನಿಮ್ಮ ಮುಖಕ್ಕೆ ಸೂಕ್ತವೊ ಅಲ್ಲವೂ ಎಂದು ತಿಳಿದು ಕೊಳ್ಳುವುದು ಒಳ್ಳೆಯದು.

ಹೇರ್ ಸ್ಟ್ರೈಟ್ನಿಂಗ್ ಮಾಡುವಾಗ ಯಾವ ರೀತಿಯ ಪ್ರಾಡಕ್ಟ್‌ನ್ನು ಬಳಸುತ್ತಿದ್ದೇವೆ ಎನ್ನುವುದು ಬಹಳ ಮುಖ್ಯ. ಯಾಕೆಂದರೆ ಇದರಲ್ಲಿ ಕೆಮಿಕಲ್‌ನ್ನು ಅಳವಡಿಸಲಾಗಿರುತ್ತದೆ. ಇದು ಕೂದಲಿನ ಪ್ರೊಟೀನ್ ಮೇಲೆ ಪರಿಣಾಮ ಬೀರುತ್ತದೆ ಜೊತೆಗೆ ಕೂದಲಿನ ಶೈಲಿಯನ್ನು ಬದಲಾಯಿಸುತ್ತದೆ. ಇದನ್ನು ಸರಿಯಾದ ಪ್ರಮಾಣದಲ್ಲಿ ಸರಿಯಾದ ರೀತಿಯಲ್ಲಿ ಬಳಸದೇ ಇದ್ದರೆ ಕೂದಲನ್ನು ಹಾಳು ಮಾಡಬಹುದು.

ಆಕರ್ಷಕವಾಗಿ ಕಾಣಬೇಕೆಂದು ಪದೇ ಪದೆ ಹೇರ್ ಸ್ಟ್ರೈಟ್ನಿಂಗ್ ಮಾಡುವುದರಿಂದ ಕೂದಲಿನ ಬುಡಕ್ಕೆ ಹಾನಿಯಾಗುವುದು ಹಾಗೂ ಕೂದಲು ಉದುರುವ ಸಮಸ್ಯೆ ಕಂಡು ಬರಬಹುದು.

ಹೇರ್ ಸ್ಟ್ರೈಟ್ನಿಂಗ್ ಮಾಡಿಸುವ ಮುನ್ನ ಹೇರ್ ಎಕ್ಸ್‌ಪರ್ಟ್‌ನ್ನು ಸಂಪರ್ಕಿಸಿ. ಅವರ ಸಲಹೆಯನ್ನು ಪಡೆದು ಮುಂದುವರಿಯುವುದು ಸೂಕ್ತ.

Gayathri SG

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

38 seconds ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

6 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

24 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

26 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

30 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

40 mins ago