Categories: ಅಂಕಣ

ಮುಖದ ಸೌಂದರ್ಯ ಹೆಚ್ಚಿಸಲೆಂದು ಈ ವಸ್ತುಗಳನ್ನು ಎಂದಿಗೂ ಹಚ್ಚಬೇಡಿ

ಸುಂದರವಾಗಿ ಕಾಣಬೇಕು ಎಂದು ಸಾಮಾನ್ಯವಾಗಿ ಎಲ್ಲರು ಇಚ್ಛೆ ಪಡುವಂತಹ ವಿಚಾರ. ಅದಕ್ಕಾಗಿ ಕೆಲವು ಯುವತಿಯರು ಮನೆಯಲ್ಲೇ ಫೇಸ್ ಪ್ಯಾಕ್, ಫೇಸ್ ಸ್ಕ್ರಬ್ ತಯಾರಿಸಿಕೊಂಡು ಬಳಸುವುದು ಸಾಮಾನ್ಯ ಆಗಿ ಬಿಟ್ಟಿದೆ. ಆದರೆ ಹಾಗೆ ಮಾಡೋ ಮೊದಲು ಕೆಲವೊಂದು ವಿಚಾರದ ಬಗ್ಗೆ ತಿಳಿದು ಕೊಳ್ಳುವುದು ಭಾರಿ ಮುಖ್ಯವಾಗುತ್ತದೆ. ಏಕೆಂದರೆ ನಾವು ಈ ಫೇಸ್ ಪ್ಯಾಕ್, ಫೇಸ್ ಸ್ಕ್ರಬ್ ನಲ್ಲಿ ಬಳಸುವ ವಸ್ತುಗಳು ಮುಖದ ಮೇಲೆ ಕಟ್ಟದಾದ ಪರಿಣಾಮ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ಇಂದು ಯಾವೆಲ್ಲಾ ವಸ್ತುಗಳನ್ನು ಮುಖಕ್ಕೆ ಹಚ್ಚ ಬಾರದು ಎಂದು ತಿಳಿದುಕೊಳ್ಳೋಣ.

ಬಾಡಿ ಲೋಷನ್ ಗಳನ್ನು ಅಪ್ಪಿತಪ್ಪಿಯೂ ಮುಖಕ್ಕೆ ಹಚ್ಚಬೇಡಿ ಇದು ಕೇವಲ ಬಾಡಿಗೆ ಮಾತ್ರ ಹಚ್ಚಬೇಕು. ಒಂದು ವೇಳೆ ಮುಖಕ್ಕೆ ಹಚ್ಚಿದರೆ ಮುಖದ ಮೇಲೆ ಮೊಡವೆ ಸಮಸ್ಯೆ ಹುಟ್ಟಿಕೊಳ್ಳುತ್ತದೆ. ಜೊತೆಗೆ ಅಲರ್ಜಿ ಸಮಸ್ಯೆಯೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಹಲ್ಲುಜ್ಜಲು ಬಳಸುವ ಟೂತ್‌ಪೇಸ್ಟ್‌ ಅನ್ನು ಮುಖಕ್ಕೆ ನೇರವಾಗಿ ಹಚ್ಚುವ ಸಾಹಸ ಮಾಡಬೇಡಿ ಏಕೆಂದರೆ ಇದರಲ್ಲಿ ಅನೇಕ ರಾಸಾಯನಿಕಗಳಿದ್ದು, ನೇರವಾಗಿ ಚರ್ಮದ ಮೇಲೆ ಪರಿಣಾಮ ಬೀರಬಹುದು. ಮೊಡವೆಗಳ ಮೇಲೆ ಟೂತ್ ಪೇಸ್ಟ್ ಹಚ್ಚುವುದರಿಂದ ಅಲರ್ಜಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.

ಫೇಸ್ ಪ್ಯಾಕ್ ಅಥವಾ ಮನೆಯಲ್ಲಿ ತಯಾರಿಸಿದ ಸ್ಕ್ರಬ್‌ಗೆ ಬೇಕಿಂಗ್ ಸೋಡಾವನ್ನು ಸೇರಿಸಬೇಡಿ. ಒಂದು ವೇಳೆ ಸೇರಿಸಿದರೆ ಚರ್ಮದ ಮೇಲೆ ಕಪ್ಪು ಕಲೆಗಳು ಉಂಟಾಗಬಹುದು. ಇನ್ನು ಮುಖದ ಮೇಲೆ ತೈಲಗಳನ್ನು ಹಚ್ಚುವುದು ಉತ್ತಮವಲ್ಲ ಅಡ್ಡ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಮುಖ ತೊಳೆಯಲು ಬಿಸಿ ನೀರು ಬಳಸುವುದು ಉತ್ತಮವಲ್ಲ. ಆದಷ್ಟು ಕೋಲ್ಡ್ ವಾಟರ್ ಅಥವಾ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆದರೆ ಯಾವುದೇ ತೊಂದರೆಯಾಗುವುದಿಲ್ಲ.

ಇನ್ನು ನಿಂಬೆ ರಸವನ್ನು ಮುಖಕ್ಕೆ ನೇರವಾಗಿ ಹಚ್ಚುವುದರಿಂದ ಚರ್ಮವು ಸುಡುವ ಸಾಧ್ಯತೆಯೂ ಹೆಚ್ಚಾಗಿದೆ. ಅಲರ್ಜಿಯಂತಹ ಸಮಸ್ಯೆಯೂ ಉಂಟಾಗಬಹುದು.

Gayathri SG

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

35 seconds ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

2 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

17 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

33 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

44 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

49 mins ago