News Karnataka Kannada
Friday, April 12 2024
Cricket
ಅಂಕಣ

ತ್ವಚೆಯ ಅಂದ ಹೆಚ್ಚಿಸುತ್ತದೆ ಕರಿಬೇವಿನ ಎಲೆಯ ಫೇಸ್ ಪ್ಯಾಕ್

Curry leaf face pack enhances skin's beauty
Photo Credit : News Kannada

ಯುವತಿಯರು ಕರಿಬೇವಿನ ಎಲೆಗಳನ್ನು ಬಳಸಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಬಹುದು. ಏಕೆಂದರೆ ಕರಿಬೇವು ಸೌಂದರ್ಯ ವರ್ಧಕ ಗುಣಗಳನ್ನು ಹೊಂದಿದೆ ಜೊತೆಗೆ ಕೂದಲಿನ ಅಂದವನ್ನು ಹೆಚ್ಚಿಸುವಲ್ಲಿಯೂ ಸಹಕಾರಿಯಾಗಿದೆ. ಇಂದು ನಾವು ಈ ಕರಿಬೇವಿನ ಎಲೆಗಳಿಂದ ಮುಖದ ಅಂದವನ್ನು ಹೇಗೆ ಹೆಚ್ಚಿಸಿಕೊಳ್ಳಬಹುದು ಎಂದು ತಿಳಿಯೋಣ. ಕರಿಬೇವಿನ ಎಲೆ ಮತ್ತು ನಿಂಬೆ ಹಣ್ಣಿನ ಫೇಸ್ ಪ್ಯಾಕ್ ಮಾಡಲು ಮೊದಲಿಗೆ ಕರಿಬೇವಿನ ಎಲೆಗಳನ್ನು ರುಬ್ಬಿ ಪೇಸ್ಟ್ ಮಾಡಿ ನಂತರ ಅದಕ್ಕೆ ಸ್ವಲ್ಪ ನಿಂಬೆ ರಸ ಬೆರೆಸಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಟ್ಟು ನಂತರ ಶುದ್ಧ ನೀರಿನಿಂದ ಮುಖವನ್ನು ಸ್ವಚ್ಛ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ ಜೊತೆಗೆ ಮುಖದ ಮೇಲಿನ ಮೊಡವೆ ಕಲೆಗಳು ಮಾಯವಾಗುತ್ತವೆ.

ಮೊಡವೆ ನಿವಾರಣೆಗಾಗಿ ಕರಿಬೇವು, ಅರಿಶಿಣ, ನಿಂಬೆ ಹಣ್ಣು ಈ ಮೂರು ಸಾಮಗ್ರಿಗಳನ್ನು ಬಳಸಿಕೊಂಡು ಫೇಸ್ ಪ್ಯಾಕ್ ತಯಾರಿಸಿ. ಈ ಪ್ಯಾಕ್ ಮಾಡಲು ಮೊದಲಿಗೆ ಕರಿಬೇವಿನ ಎಲೆ ಮತ್ತು ಅರಿಶಿನ ಪುಡಿಯನ್ನು ಹಾಕಿ ರುಬ್ಬಿಕೊಳ್ಳಿ ನಂತರ ಅದಕ್ಕೆ
ನಿಂಬೆ ರಸ ಸೇರಿಸಿ ಮುಖಕ್ಕೆ ಮತ್ತು ಕುತ್ತಿಗೆ ಭಾಗಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಒಣಗಲು ಬಿಡಿ ನಂತರ ಚೆನ್ನಾಗಿ ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.

ಅರಿಶಿಣ ಮತ್ತು ಕರಿಬೇವಿನ ಎಲೆಯ ಪೇಸ್ಟ್‌ ತಯಾರಿಸಿ ಅದಕ್ಕೆ ಸ್ವಲ್ಪ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ ನಂತರ ಮುಖ ತೊಳೆದುಕೊಳ್ಳಿ. ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು