Categories: ಅಂಕಣ

ಹುಬ್ಬಿನ ಸೌಂದರ್ಯ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್

ಹುಬ್ಬು ಯುವತಿಯರ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಹುಬ್ಬು ದಪ್ಪಗೆ ಇದ್ದರೆ ವಿನ್ಯಾಸ ಮಾಡುವಾಗ ಅಂದವಾಗಿ ಕಾಣುವಂತೆ ಮಾಡುತ್ತದೆ. ಇನ್ನು ಕೆಲವರಿಗೆ ಹುಬ್ಬು ತೆಲುವಾಗಿ ಇರುತ್ತದೆ. ಆಗ ಅದು ಅಷ್ಟೊಂದು ಮುಖಕ್ಕೆ ಲುಕ್ ಕೊಡೋದಿಲ್ಲ. ಹಾಗಾಗಿ ಹುಬ್ಬುಗಳ ಬೆಳವಣಿಗೆ ಚೆನ್ನಾಗಿ ಆಗಬೇಕಿದ್ದರೆ, ಪ್ರತಿದಿನ ಹುಬ್ಬುಗಳಿಗೆ ಈರುಳ್ಳಿ ರಸ ಹಚ್ಚಿ.

ಆಲಿವ್‌ಎಣ್ಣೆಯಲ್ಲಿ ಹತ್ತಿ ಉಂಡೆಯನ್ನು ಅದ್ದಿ ಹುಬ್ಬಿನ ಕೂದಲ ಮೇಲೆ ಮಸಾಜ್‌ ಮಾಡಬೇಕು. ಇದನ್ನು ನಿರಂತರವಾಗಿ ಮಾಡುವುದರಿಂದ ಬೇಗನೆ ಫಲಿತಾಂಶ ನಿರೀಕ್ಷೆ ಮಾಡಬಹುದು.

ಇನ್ನೂ ಹುಬ್ಬಿನ ಕೂದಲು ಉದುರುವ ಸಮಸ್ಯೆ ಇರುವವರು ಕೂದಲು ಹುಟ್ಟುವಂತೆ ಮಾಡಲು ಪ್ರತಿ ರಾತ್ರಿ ಮಲಗುವ ಮುನ್ನ, ಹರಳೆಣ್ಣೆ ಹಚ್ಚಿ ಹುಬ್ಬಿಗೆ ಮಸಾಜ್‌ ಮಾಡಿ. ಅಥವಾ ಅರ್ಧ ಚಮಚ ಆಲಿವ್‌ ಎಣ್ಣೆಗೆ, ಎರಡು ಹನಿ ಜೇನುತುಪ್ಪ ಬೆರೆಸಿ, ಹುಬ್ಬಿಗೆ ಹಚ್ಚಿ, ಸ್ವಲ್ಪ ಸಮಯದ ನಂತರ ತೊಳೆಯಿರಿ.

ಲೋಳೆಸರದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದು ಇತ್ತ ಮುಖದ ಸೌಂದರ್ಯದ ದೃಷ್ಟಿಯಿಂದ ನೋಡಿದಾಗಲೂ ಸಹಕಾರಿ, ಜೊತೆಗೆ ಮುಖದ ಮೇಲೆ ಮೂಡುವ ಮೊಡವೆ, ಕಲೆಗಳು ಇವೆಲ್ಲವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಅಲ್ಲದೆ ಇದು ಹುಬ್ಬಿನ ಬೆಳವಣಿಗೆಗೆ ಸಹಕರಿಸುತ್ತದೆ. ಇದು ದಟ್ಟ ಹುಬ್ಬಿನ ಕೂದಲ ಬೆಳವಣಿಗೆಗೆ ಸಹಕರಿಸುತ್ತದೆ. ಪ್ರತಿದಿನ ತಾಜಾ ಲೋಳೆಸರ ತಿರುಳನ್ನು ಹುಬ್ಬುಗಳಿಗೆ ಹಚ್ಚಿ.

ಕೊಬ್ಬರಿ ಎಣ್ಣೆಯನ್ನು ಸ್ವಲ್ಪ ಬಿಸಿ ಮಾಡಿ ನಂತರ ಅದನ್ನು, ಹುಬ್ಬಿಗೆ ಹಚ್ಚಿ ಮಸಾಜ್‌ ಮಾಡಿಕೊಳ್ಳಿ. ಹುಬ್ಬಿನ ಕೂದಲು ದಟ್ಟವಾಗಿ ಬೆಳೆಯುತ್ತದೆ. ಅಥವಾ ಮೆಂತ್ಯೆಕಾಳನ್ನು ರುಬ್ಬಿ ಪೇಸ್ಟ್‌ ತಯಾರಿಸಿ, ಹುಬ್ಬಿಗೆ ಹಚ್ಚಿ ಇದು ಕೂಡ ಉತ್ತಮ ರಿಸಲ್ಟ್ ಕೊಡುತ್ತದೆ.

Gayathri SG

Recent Posts

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

18 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

23 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

36 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

42 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

45 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

1 hour ago