News Karnataka Kannada
Sunday, April 21 2024
Cricket
ಆರೋಗ್ಯ

ಪ್ರತಿಯೊಬ್ಬರೂ ವೈದ್ಯರಿಗೆ ಕೃತಜ್ಞತೆ ಸಲ್ಲಿಸಲೇ ಬೇಕು!

Doctor
Photo Credit : Pexels

ಜುಲೈ 1ನ್ನು ಭಾರತದಲ್ಲಿ ವೈದ್ಯರ ದಿನಾಚರಣೆಯನ್ನಾಗಿ ಆಚರಿಸುತ್ತಾ ಬರಲಾಗುತ್ತಿದೆ. ಈ ವೇಳೆ ಡಾ.ನಾ.ಸೋಮೇಶ್ವರ್  ಅವರ ಮಾತುಗಳು ನೆನಪಾಗುತ್ತವೆ. ಅವರು ಹೇಳುವಂತೆ ವೈದ್ಯಕೀಯ ಒಂದು ವೃತ್ತಿಯಲ್ಲ, ಅದು ಅರಿವು, ಮಾನವೀಯತೆ, ಶ್ರದ್ಧೆ ಹಾಗೂ ಸೇವಾ ಮನೋಭಾವ ಮೇಳೈಸಿರುವ ಸೇವೆ. ವೈದ್ಯನಾದವನಿಗೆ ಹದ್ದಿನ ಕಣ್ಣುಗಳು, ಸಿಂಹದ ಹೃದಯ ಹಾಗೂ ಹೆಣ್ಣಿನ ಕೋಮಲ ಕರಗಳಿರಬೇಕಾಗುತ್ತದೆ. ಆಗ ಮಾತ್ರ ಅವನು ವೃತ್ತಿಗೆ ನ್ಯಾಯವನ್ನು ಒದಗಿಸಬಲ್ಲನು.

ವೈದ್ಯನು ಸದಾ ಜಾಗೃತನಾಗಿರಬೇಕು. ಅವನು ಮಾಡಬಹುದಾದ ಒಂದು ಸಣ್ಣ ತಪ್ಪು ಒಂದು ಜೀವಕ್ಕೆ (ತನ್ಮೂಲಕ ಒಂದು  ಕುಟುಂಬಕ್ಕೆ) ಎರವಾಗಬಹುದು. ಹಾಗಾಗಿ ಪ್ರತಿ ಕ್ಷಣದಲ್ಲಿಯೂ ಮೈಯೆಲ್ಲ ಕಣ್ಣಾಗಿಟ್ಟುಕೊಂಡಿರಬೇಕಾಗುತ್ತದೆ. ವೈದ್ಯನು ಸದಾ ಒತ್ತಡದಲ್ಲಿರುವುದು ಅನಿವಾರ್ಯ. ವೈದ್ಯನು ತಾನು ಎಷ್ಟೇ ಒತ್ತಡದಲ್ಲಿರಲಿ, ಅದನ್ನು ತೋರಿಸಿಕೊಳ್ಳುವಹಾಗಿಲ್ಲ. ರೋಗಿಗೆ ಚಿಕಿತ್ಸೆಯನ್ನು ಹಾಗೂ ನೋವಿನಲ್ಲಿ ಪಾಲ್ಗೊಂಡು ಸಾಂತ್ವನವನ್ನು ನೀಡಬೇಕಾಗುತ್ತದೆ. ವೈದ್ಯ ದಿನಾಚರಣೆ ದಿನದಂದು  ಡಾ.ನಾ.ಸೋಮೇಶ್ವರ್  ಅವರು ಹೇಳಿದ ಮಾತುಗಳು ಎಷ್ಟೊಂದು ಅರ್ಥಪೂರ್ಣ ಎನಿಸದಿರದು.

ಇಂದು ವೈದ್ಯಕೀಯ ವೃತ್ತಿ ಕವಲುಹಾದಿಯಲ್ಲಿ ನಿಂತಿದ್ದು, ಸೇವೆಯಾಗಿ ಉಳಿಯದೇ ಉದ್ಯಮವಾಗಿದೆ. ಆದರೆ ಆ ವೃತ್ತಿಗೆ  ಅಂದು-ಇಂದು-ಮುಂದು ತನ್ನದೇ ಗೌರವ ಇದ್ದೇ ಇರುತ್ತೆ ಅದನ್ನು ಮನಗಂಡು ವೈದ್ಯರು ಕಾರ್ಯನಿರ್ವಹಿಸಬೇಕಾಗುತ್ತದೆ. ವೈದ್ಯ ವೃತ್ತಿ ಎನ್ನುವುದು ಪವಿತ್ರವಾದ ವೃತ್ತಿ. ಅದಕ್ಕೆ ತನ್ನದೇ ಆದ ಗೌರವ, ಜವಬ್ದಾರಿ ಎಲ್ಲವೂ ಇದೆ. ಹೀಗಾಗಿ ವೈದ್ಯರು ಒಂದು ಕ್ಷಣ ಎಚ್ಚರ ತಪ್ಪಿದರೂ ಅದರಿಂದ ಭಾರೀ ಅನಾಹುತ ಸಂಭವಿಸಿ ಬಿಡುತ್ತದೆ. ಹೀಗಾಗಿ ಪವಿತ್ರ ವೃತ್ತಿಯಾಗಿರುವ ವೈದ್ಯ ವೃತ್ತಿಯನ್ನು ಮಾಡುವ ಎಲ್ಲಾ ವೈದ್ಯರು ಒಂದೆಡೆ ಕಲೆತು  ವೈದ್ಯರ ದಿನಾಚರಣೆ ಸಂದರ್ಭ ಮನನ ಮಾಡಿಕೊಳ್ಳಲೊಂದು ಅವಕಾಶ ದೊರೆತಂತಾಗಿದೆ.

ಇವತ್ತು ವೈದ್ಯಲೋಕ ಅಗಾಧವಾಗಿ ಬೆಳೆದಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಾಣಸಿಗುವ ಆರೋಗ್ಯ ಕೇಂದ್ರದಿಂದ ಆರಂಭವಾಗಿ  ಸೂಪರ್ ಸ್ಪೆಷಾಲಿಟಿ, ಹೈಟೆಕ್ ಆಸ್ಪತ್ರೆಗಳು ನಮ್ಮ ದೇಶದಲ್ಲಿವೆ. ವೈದ್ಯಕೀಯ ಕಾಲೇಜುಗಳು ಪ್ರತಿವರ್ಷ ಲಕ್ಷಾಂತರ ವೈದ್ಯರನ್ನು ತಯಾರು ಮಾಡಿ ಕಳುಹಿಸುತ್ತಿದೆ. ಹೀಗಾಗಿ ವೈದ್ಯಕೀಯ ಕ್ಷೇತ್ರ ವಿಶಾಲವಾಗುತ್ತಿದೆ.  ಮತ್ತೊಂದೆಡೆ ಹಣ ಮಾಡುವ ದಂಧೆಯಾಗಿಯೂ ಬದಲಾಗುತ್ತಿದೆ ಎಂದರೆ ತಪ್ಪಾಗಲಾರದು. ಇದರ ನಡುವೆ ಸಾಮಾನ್ಯ ಜನರಿಗೆ ಆರೋಗ್ಯ ಸೇವೆ ಮರೀಚಿಕೆಯಾಗುತ್ತಿದೆ. ಇದರ ನಡುವೆ ಬಡವರ ಸೇವೆ ಮಾಡುತ್ತಾ ತಮ್ಮ ವೃತ್ತಿಧರ್ಮ ಪಾಲಿಸುತ್ತಿರುವ ವೈದ್ಯರೂ ಇಲ್ಲದಿಲ್ಲ.

ಬಡ, ಅನಾಥ, ವೃದ್ಧಾಶ್ರಮಗಳಿಗೆ ತೆರಳಿ ಚಿಕಿತ್ಸೆ ನೀಡುವವರು ಒಂದು ಕಡೆಯಾದರೆ ಮತ್ತೊಂದೆಡೆ ರೋಗಿಗಳಿಗೆ ಹೊರೆಯಾದಂತೆ ಆರೋಗ್ಯ ಸೇವೆ ನೀಡುವ ವೈದ್ಯರೂ ಇದ್ದಾರೆ. ಇಂತಹ ವೈದ್ಯರಿಗೆ ಪ್ರತಿಯೊಬ್ಬರೂ ಕೃತಜ್ಞತೆಯನ್ನು   ಸಲ್ಲಿಸಲೇ ಬೇಕು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು