News Karnataka Kannada
Monday, April 29 2024
ಅಂಕಣ

ಮುಖದ ಅಂದ ಹೆಚ್ಚಿಸುತ್ತದೆ ಮಾವಿನ ಹಣ್ಣಿನ ಫೇಸ್ ಪ್ಯಾಕ್

Mango face pack enhances the beauty of the face
Photo Credit : Freepik

ಯುವತಿಯರು ಸಾಮಾನ್ಯವಾಗಿ ಮುಖದ ಸೌಂದರ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ತ್ವಚೆ ಕಲೆ ರಹಿತವಾಗಿರಬೇಕು, ಮುಖ ಹೊಳೆಯುತ್ತಿರಬೇಕು ಎಂದು ಎಲ್ಲರ ಇಚ್ಛೆಯಾಗಿರುತ್ತದೆ. ಅಂತವರಿಗೆ ಕೆಲವೊಂದು ಬ್ಯೂಟಿ ಟಿಪ್ಸ್ ಇಲ್ಲಿದೆ ನೋಡಿ. ಮಾವಿನ ಹಣ್ಣಿನ ಬಗ್ಗೆ ನಮಗೆ ಎಲ್ಲರಿಗೂ ಗೊತ್ತೇ ಇದೆ. ಮಾವಿನ ಹಣ್ಣಿನ ಜ್ಯೂಸ್ ಕುಡಿಯಲು ಟೇಸ್ಟಿ ಹಾಗೆ ತಿನ್ನಲು ರುಚಿಯಾಗಿರುತ್ತದೆ. ಇದರ ಜೊತೆಗೆ ಮಾವಿನ ಹಣ್ಣು ಸೌಂದರ್ಯ ವೃದ್ಧಿ ಮಾಡಲು ಸಹಕಾರಿಯಾಗಿದೆ. ಹಾಗಾದರೆ ಇಂದು ನಾವು ಮಾವಿನ ಹಣ್ಣಿನಿಂದ ಸೌಂದರ್ಯ ವೃದ್ಧಿ ಹೇಗೆ ಮಾಡಿಕೊಳ್ಳಬಹುದು ಎಂದು ತಿಳಿದುಕೊಳ್ಳೋಣ.

ಮುಖದ ಸೌಂದರ್ಯ ಹೆಚ್ಚಿಸಲು, ಮಾವಿನ ತಿರುಳು, ಮುಲ್ತಾನಿ ಮಿಟ್ಟಿ, ಮೊಸರು ಹಾಗೂ ಹಾಲು ಸೇರಿಸಿ ಪೇಸ್ ಪ್ಯಾಕ್ ತಯಾರಿಸಿಕೊಳ್ಳಿ.ಇದನ್ನು ಮಾಡಲು ಮೊದಲಿಗೆ ಮೇಲೆ ಹೇಳಿರುವ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ಮಿಕ್ಸ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಿ ನಂತರ ಅದನ್ನು ಮುಖ ಸ್ವಚ್ಛ ಮಾಡಿ ಅಪ್ಲೈ ಮಾಡಿ. ಸ್ವಲ್ಪ ಸಮಯ ಹಾಗೆ ಬಿಟ್ಟು ತನ್ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಿ ಹೀಗೆ ಕ್ರಮೇಣ ಮಾಡಿದರೆ ಮುಖದ ಅಂದ ಹೆಚ್ಚಾಗುತ್ತದೆ.

ಮಾವಿನ ಹಣ್ಣಿನ ಫೇಸ್ ಪ್ಯಾಕ್ ಮಾಡಲು ಒಂದು ಪಾತ್ರೆಯಲ್ಲಿ ಅರಿಶಿಣ, ಮಾವಿನ ತಿರುಳು, ಜೇನುತುಪ್ಪ ಮತ್ತು ಬಾದಾಮಿ ಎಣ್ಣೆ ಹಾಕಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಸ್ವಲ್ಪ ಸಮಯ ಹಾಗೆ ಒಣಗಲು ಬಿಡಿ ನಂತರ ಚೆನ್ನಾಗಿ ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ ಹೀಗೆ ಕ್ರಮೇಣ ಮಾಡಿದರೆ ಉತ್ತಮ ರಿಸಲ್ಟ್ ಪಡೆಯಬಹುದು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು