Categories: ಅಂಕಣ

ತ್ವಚೆಯ ಅಂದ ಹೆಚ್ಚಿಸುತ್ತದೆ ದಾಳಿಂಬೆ ಹಣ್ಣಿನ ಸಿಪ್ಪೆಯ ಫೇಸ್ ಪ್ಯಾಕ್

ಸಾಮಾನ್ಯವಾಗಿ ದಾಳಿಂಬೆ ಹಣ್ಣಿನ ಬಗ್ಗೆ ಎಲ್ಲರಿಗೂ ತಿಳಿದಿರುತ್ತದೆ. ಇದು ಇತ್ತ ಆರೋಗ್ಯದ ದೃಷ್ಟಿಯಿಂದಲೂ ಉಪಕಾರಿ ಅತ್ತ ಸೌಂದರ್ಯದ ದೃಷ್ಟಿ ಯಿಂದಲೂ ಸಹಕಾರಿಯಾಗಿದೆ. ದಾಳಿಂಬೆ ಹಣ್ಣಿನ ಸಿಪ್ಪೆಯೂ ಬಾರೀ ಒಳ್ಳೆಯದು. ಇದರಿಂದ ಸೌಂದರ್ಯ ಹೆಚ್ಚಿಸಿಕೊಳ್ಳಬಹುದು. ಹಾಗಾದರೆ ಈ ದಾಳಿಂಬೆ ಹಣ್ಣಿನ ಸಿಪ್ಪೆಯಿಂದ ಸೌಂದರ್ಯ ಹೇಗೆ ವೃದ್ಧಿಸಿಕೊಳ್ಳಬಹುದು ಎಂದು ತಿಳಿಯೋಣ. ಮೊದಲಿಗೆ ದಾಳಿಂಬೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ ನಂತರ ಅದಕ್ಕೆ ಹಾಲು , ಕಡಲೆ ಹಿಟ್ಟು ಅಂದಾಜು ಪ್ರಮಾಣದಲ್ಲಿ ಹಾಕಿ ಮಿಶ್ರಣ ಮಾಡಿಕೊಂಡು ನಿಮ್ಮ ಮುಖ ಹಾಗೂ ಕುತ್ತಿಗೆಯ ಭಾಗದಲ್ಲಿ ಇದನ್ನು ಹಚ್ಚಿ ಮಸಾಜ್ ಮಾಡಿ ನಂತರ ಸ್ವಲ್ಪ ಸಮಯ ಹಾಗೆ ಬಿಡಿ ನಂತರ ಮುಖವನ್ನು ಚೆನ್ನಾಗಿ ನೀರಿನಿಂದ ತೊಳೆದು ಕೊಳ್ಳಿ.

ದಾಳಿಂಬೆ ಸಿಪ್ಪೆಯ ಪುಡಿ ಮತ್ತು ಮೊಸರನ್ನು ಮಿಕ್ಸ್ ಮಾಡಿ ಈ ಪೇಸ್ಟ್ ಅನ್ನು ಮುಖ ಹಾಗೂ ಕುತ್ತಿಗೆ ಭಾಗಕ್ಕೆ ಹಚ್ಚಿ ಸ್ಪಲ್ಪ ಸಮಯ ಹಾಗೆಯೇ ಬಿಟ್ಟು ನಂತರ ಶುದ್ಧ ನೀರಿನಿಂದ ಮುಖವನ್ನು ಸ್ವಚ್ಛ ಮಾಡಿ ಕೊಳ್ಳಿ.

ದಾಳಿಂಬೆ ಹಣ್ಣಿನ ಸಿಪ್ಪೆಯ ಪುಡಿಯನ್ನು ರೋಸ್ ವಾಟರ್ ಜೊತೆಗೆ ಮಿಶ್ರಣ ಮಾಡಿ ಪೇಸ್ಟ್ ತಯಾರು ಮಾಡಿ ನಂತರ ಅದನ್ನು ಮುಖದ ಮೇಲೆ ಹಚ್ಚಿ, ಸ್ವಲ್ಪ ಸಮಯ ಹಾಗೆಯೇ ಬಿಡಿ ನಂತರ ಮುಖ ವನ್ನು ಚೆನ್ನಾಗಿ ತೊಳೆದುಕೊಳ್ಳಿ.

ದಾಳಿಂಬೆ ಪುಡಿಗೆ ನಿಂಬೆ ರಸ ಮಿಶ್ರಣ ಮಾಡಿ ಚೆನ್ನಾಗಿ ಪೇಸ್ಟ್ ತಯಾರಿಸಿಕೊಳ್ಳಿ, ನಂತರ ಇದನ್ನು ಮೊಡವೆಗಳ ಮೇಲೆ ಹಚ್ಚಿ. ಅರ್ಧ ಬಿಟ್ಟ ಬಳಿಕ ತಣ್ಣೀರಿನಿಂದ ಮುಖ ತೊಳೆದುಕೊಳ್ಳಿ. ಕ್ರಮೇಣ ಹೀಗೆ ಮಾಡುವುದರಿಂದ ಮುಖದ ಮೇಲಿನ ಮೊಡವೆಗಳು ಮಾಯವಾಗುತ್ತದೆ.

ಹಾಲು ಮತ್ತು ದಾಳಿಂಬೆ ಸಿಪ್ಪೆಯ ಹುಡಿಯನ್ನು ಚೆನ್ನಾಗಿ ಮಿಶ್ರಣ ಮಾಡಿ ದಪ್ಪೆಗೆ ಪೇಸ್ಟ್ ತಯಾರಿಸಿ ನಂತರ ಇದನ್ನು ಮುಖದ ಮೇಲೆ ದಪ್ಪೆಗೆ ಹಚ್ಚಿ ಮಸಾಜ್ ಮಾಡಿ. ನಂತರ ಸ್ವಲ್ಪ ಸಮಯ ಹಾಗೆ ಬಿಟ್ಟು ತಣ್ಣೀರಿನಿಂದ ಚೆನ್ನಾಗಿ ಮುಖ ವಾಶ್ ಮಾಡಿ. ಇದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago