News Karnataka Kannada
Sunday, May 05 2024
ಅಂಕಣ

ಹೊಳೆಯುವ ತ್ವಚೆ ಪಡೆಯಲು ಆಲೂಗಡ್ಡೆ ಫೇಸ್ ಪ್ಯಾಕ್

Potato face pack to get glowing skin
Photo Credit : Freepik

ಹೆಣ್ಣು ಮಕ್ಕಳು ಸೌಂದರ್ಯದ ಬಗ್ಗೆ ಅತೀ ಹೆಚ್ಚು ಕಾಳಜಿ ವಹಿಸುತ್ತಾರೆ. ಅಂತವರಿಗಾಗಿ ಆಲೂಗಡ್ಡೆ ಸಹಕಾರಿಯಾಗುತ್ತದೆ. ಆಲೂಗಡ್ಡೆಯಿಂದ ಫೇಸ್ ಪ್ಯಾಕ್ ಮಾಡಲು ಕೆಲವೊಂದು ವಿಧಾನಗಳು ಇಲ್ಲಿದೆ. ಆಲೂಗಡ್ಡೆ ರಸ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ, ಮುಖ ಮತ್ತು ಕುತ್ತಿಗೆಯ ಮೇಲೆ ಅನ್ವಯಿಸಿ ಮತ್ತು 10 ನಿಮಿಷಗಳ ಕಾಲ ಹಾಗೇ ಬಿಟ್ಟು ನೀರಿನಿಂದ ತೊಳೆಯಿರಿ. ಇದು ಚರ್ಮವನ್ನು ಹೊಳಪಿಸಲು ಸಹಾಯ ಮಾಡುತ್ತದೆ.

ಟೊಮೆಟೋ ರಸ ಹಾಗೂ ಆಲೂಗಡ್ಡೆ ರಸವನ್ನು ತೆಗೆದುಕೊಂಡು ಅದನ್ನು ಸರಿಯಾಗಿ ಮಿಶ್ರಣ ಮಾಡಿ ತ್ವಚೆಗೆ ಚೆನ್ನಾಗಿ ಮಸಾಜ್ ಮಾಡಿ, ನಂತರ ಒಣಗಳು ಬಿಟ್ಟು ಬಳಿಕ ನೀರಿನಿಂದ ತೊಳೆಯಿರಿ. ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ಆಲೂಗಡ್ಡೆ ತುರಿದು ಅರಿಶಿನ ಬೆರೆಸಿ ಮುಖಕ್ಕೆ ಹಚ್ಚಿ 30 ನಿಮಿಷ ಹಾಗೆ ಬಿಡಿ. ಅದರ ನಂತರ ಮುಖವನ್ನು ಶುದ್ಧ ನೀರಿನಿಂದ ತೊಳೆಯಿರಿ. ಈ ಪ್ಯಾಕ್ ಅನ್ನು ವಾರಕ್ಕೆ ಎರಡು ಬಾರಿ ಬಳಕೆಮಾಡಿ ಉತ್ತಮ ರಿಸಲ್ಟ್ ಪಡೆಯಬಹುದು.

ಮೊಟ್ಟೆ ಮತ್ತು ಆಲೂಗಡ್ಡೆ ಫೇಸ್ ಪ್ಯಾಕ್ ತಯಾರಿಸಲು ಅರ್ಧ ಆಲೂಗಡ್ಡೆ ತುರಿದು ಅದರ ರಸ ತೆಗೆದುಕೊಳ್ಳಿ.ಅದಕ್ಕೆ ಒಂದು ಮೊಟ್ಟೆಯ ಬಿಳಿ ಭಾಗ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ, ನಂತರ ಒಣಗಳು ಬಿಡಿ. ನಂತರ ನೀರಿನಿಂದ ಮುಖ ತೊಳೆಯಿರಿ. ಇದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ಆಲೂಗಡ್ಡೆ ಫೇಸ್ ಪ್ಯಾಕ್ ತಯಾರಿಸಲು ಆಲೂಗಡ್ಡೆ ರಸಕ್ಕೆ, ನಿಂಬೆ ರಸ, ಅರ್ಧ ಚಮಚ ಜೇನು ತುಪ್ಪ ಮಿಶ್ರಣ ಮಾಡಿ ತ್ವಚೆಗೆ ಲೇಪಿಸಿಕೊಂಡು ಸ್ವಲ್ಪ ಸಮಯ ಬಿಟ್ಟು ಮುಖವನ್ನು ತೊಳೆಯಿರಿ. ಇದು ತ್ವಚೆಯಲ್ಲಿನ ಹೆಚ್ಚುವರಿ ಎಣ್ಣೆಯನ್ನು ತೊಡೆದು ಹಾಕುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು