News Karnataka Kannada
Saturday, May 04 2024
ಅಂಕಣ

ಕೇಶ ಸೌಂದರ್ಯ ಹೆಚ್ಚಿಸಲು ಬಳಸಿ ಅಲೋವೆರಾ ಜೆಲ್

Use aloevera to enhance hair beauty
Photo Credit : Freepik

ಸೌಂದರ್ಯ ಪ್ರಿಯೆ ಹೆಣ್ಣು ತನ್ನ ಕೇಶದ ಬಗ್ಗೆ ಅತೀವ ಕಾಳಜಿ ತೋರುತ್ತಾಳೆ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ಕೇಶ ಸಮಸ್ಯೆಗಳು ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತದೆ. ಕೂದಲು ಉದುರುವುದು, ತಲೆ ಹೊಟ್ಟು, ಕೂದಲು ಎರಡು ಭಾಗ ಆಗುವುದು ಹೀಗೆ ಅನೇಕ ತರಹದ ಸಮಸ್ಯೆಗಳು ಎದುರಾಗುತ್ತದೆ. ಇಂತಹ ಸಮಸ್ಯೆಗಳಿಂದ ದೂರ ಆಗಲು ಇಲ್ಲಿದೆ ಕೆಲವು ಸಲಹೆಗಳು.

ಅಲೋವೆರವನ್ನು ಚೆನ್ನಾಗಿ ರುಬ್ಬಿ ಅದಕ್ಕೆ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲ ಬುಡಕ್ಕೆ ಹಾಗೂ ಕೂದಲಿಗೆ ಚೆನ್ನಾಗಿ ಹಚ್ಚಿ ಸ್ವಲ್ಪ ಸಮಯ ಹಾಗೆ ಬಿಡಿ. ನಂತರ ನೀರಿನಿಂದ ತೊಳೆದು ಶ್ಯಾಂಪೂ ಹಾಕಿ ಕೂದಲನ್ನು ತೊಳೆಯಿರಿ. ಈ ರೀತಿ ಮಾಡುವುದರಿಂದ ತಲೆ ಹೊಟ್ಟು ಕಡಿಮೆಯಾಗಿ ಕೂದಲು ಕಾಂತಿಯುತವಾಗಿ ಉದ್ದವಾಗಿ ಬೆಳೆಯುತ್ತದೆ. ಪ್ರತಿ ದಿನ ಅಲೋವೆರಾ ಜೆಲ್ ಅನ್ನು ಕೂದಲ ಬುಡಕ್ಕೆ ಹಚ್ಚಿ ಸ್ವಲ್ಪ ಸಮಯ ಬಿಟ್ಟು ತೊಳೆಯುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

ತಲೆಹೊಟ್ಟು ಸಮಸ್ಯೆ ಸಾಮಾನ್ಯವಾಗಿ ಎಲ್ಲರೂ ಅನುಭವಿಸುತ್ತಾರೆ ಅಂಥವರು ಅಲೋವೆರಾ ಜೆಲ್ ಅನ್ನು ತಲೆಯ ಬುಡ ಭಾಗಕ್ಕೆ ಹಚ್ಚಿಕೊಳ್ಳಬೇಕು.

ಅಲೋವೆರ ಜೆಲ್ ಗೆ ಎರಡು ಚಮಚ ನಿಂಬೆರಸ ಹಾಕಿ ಕೂದಲಿಗೆ ಹಚ್ಚಿ ಹಾಗೆಯೇ ಬಿಡಿ. ಅದು ಒಣಗಿದ ಬಳಿಕ ತಂಪಾದ ನೀರಿನಿಂದ ಚೆನ್ನಾಗಿ ತೊಳೆಯಬೇಕು. ಹೀಗೆ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.

ಅಲೋವೆರಾ ಜೆಲ್ ಗೆ ಮೊಟ್ಟೆಯ ಬಿಳ ಭಾಗವನ್ನು ಹಾಕಿ ಅದಕ್ಕೆ ಸ್ವಲ್ಪ ಮೊಸರು ಹಾಕಿ ಮಿಶ್ರಣ ಮಾಡಿ. ನಂತರ ಅದನ್ನು ಚೆನ್ನಾಗಿ ಕೂದಲಿನ ಬುಡಕ್ಕೆ ಹಾಗೂ ಕೂದಲಿಗೆ ಹಚ್ಚಿ ಒಣಗಳು ಬಿಡಿ. ನಂತರ ತಣ್ಣನೆಯ ನೀರಿನಿಂದ ಕೂದಲನ್ನು ತೊಳೆಯಿರಿ. ಈ ರೀತಿಯಾಗಿ ಕೂದಲಿಗೆ ಹಚ್ಚುವುದರಿಂದ ಕೇಶ ಸೌಂದರ್ಯ ಇಮ್ಮಡಿಗೊಳ್ಳುತ್ತದೆ. ಇದರಿಂದ ತಲೆಹೊಟ್ಟು ನಿವಾರಣೆಯಾಗಿ ಕೂದಲು ದಪ್ಪವಾಗಿ ಉದ್ದವಾಗಿ ಬೆಳೆಯುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11034
Gayathri Gowda

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು