ಸೌಂದರ್ಯದ ಬಗ್ಗೆ ಅತೀವ ಕಾಳಜಿ ಇರುವ ಹೆಣ್ಣು ಮಕ್ಕಳು ಕೊತ್ತಂಬರಿ ಸೊಪ್ಪಿನ ಫೇಸ್ ಪ್ಯಾಕ್ ಗಳನ್ನು ಮನೆಯಲ್ಲೇ ತಯಾರಿಸಿಕೊಂಡು ಬಳಕೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಿಸಿಕೊಳ್ಳುದರ ಜೊತೆಗೆ ಮುಖದಲ್ಲಿ ಕಾಣಿಸಿಕೊಳ್ಳುವ ಹಲವಾರು ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಈ ಫೇಸ್ ಪ್ಯಾಕ್ ಮನೆಯಲ್ಲೇ ತಯಾರಿಸಲು ಮೊದಲಿಗೆ ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ರುಬ್ಬಿಕೊಳ್ಳಿ, ನಂತರ ಅದಕ್ಕೆ ಟೊಮೆಟೊ ರಸ ಮತ್ತು ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ಅದಕ್ಕೆ ಸ್ವಲ್ಪ ಮುಲ್ತಾನಿ ಮಿಟ್ಟಿ ಹಾಕಿ ನಂತರ ತಯಾರಾದ ಪೇಸ್ಟ್ ಅನ್ನು ಮುಖಕ್ಕೆ ಅನ್ವಯಿಸಿ ಸ್ವಲ್ಪ ಸಮಯ ಹಾಗೆ ಒಣಗಲು ಬಿಡಿ ನಂತರ ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚಾಗುತ್ತದೆ.
ಕೊತ್ತಂಬರಿ ಸೊಪ್ಪುಗಳನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ತಯಾರಿಸಿ ನಂತರ ಇದಕ್ಕೆ ಒಂದು ಮೊಟ್ಟೆಯ ಬಿಳಿ ಲೋಳೆ ಹಾಗೂ ಓಟ್ಸ್ ಹುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಮುಖಕ್ಕೆ ಹಚ್ಚಿ ಮಸಾಜ್ ಮಾಡಿ ಹೀಗೆ ಮಾಡುವುದರಿಂದ ಉತ್ತಮ ರಿಸಲ್ಟ್ ಪಡೆಯಬಹುದು.
ಕೊತ್ತಂಬರಿ ಸೊಪ್ಪಿಗೆ ನೀರನ್ನು ಬೆರೆಸದೆ ಚೆನ್ನಾಗಿ ರುಬ್ಬಿಕೊಳ್ಳಿ ನಂತರ ಈ ಪೇಸ್ಟ್ ಗೆ ಅರಿಶಿನ ಮತ್ತು ಜೇನುತುಪ್ಪವನ್ನು ಸೇರಿಸಿ ಪೇಸ್ಟ್ ತಯಾರಿಸಿ ಕೊಳ್ಳಿ ಈಗ ತಯಾರಾದ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ಹೀಗೆ ಮಾಡುವುದರಿಂದ ಮುಖದ ಮೇಲಿನ ಮೊಡವೆ ಹಾಗೂ ಗುಳ್ಳೆಗಳು ಮಾಯವಾಗಿ ಮುಖದ ಅಂದವನ್ನು ಹೆಚ್ಚಿಸುತ್ತದೆ.
ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ತಯಾರಿಸಿಕೊಳ್ಳಿ ನಂತರ ಅದಕ್ಕೆ ಜೇನುತುಪ್ಪ ಬೆರೆಸಿ (ಅಂದಾಜು ಪ್ರಮಾಣದಲ್ಲಿ) ತಯಾರಾದ ಪೇಸ್ಟ್ ತುಟಿಗೆ ಅನ್ವಯಿಸಿ, ಮೃದುವಾಗಿ ಮಸಾಜ್ ಮಾಡಿ ಹೀಗೆ ಪ್ರತಿ ದಿನ ಮಾಡುವುದರಿಂದ ಪರಿಣಾಮಕಾರಿಯಾದ ರಿಸಲ್ಟ್ ಪಡೆಯಬಹುದು.
ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ರುಬ್ಬಿ ಅದಕ್ಕೆ ಹಾಲು, ನಿಂಬೆ ರಸ, ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ತಯಾರಾದ ಮಿಶ್ರಣವನ್ನು ಮುಖಕ್ಕೆ ಮತ್ತು ಕತ್ತಿನ ಭಾಗಕ್ಕೆ ಅನ್ವಯಿಸಿ. ಸ್ವಲ್ಪ ಸಮಯ ಹಾಗೆ ಒಣಗಲು ಬಿಡಿ ಹೀಗೆ ಕ್ರಮೇಣ ಮಾಡುವುದರಿಂದ ತ್ವಚೆ ಮೃದು ಆಗುವುದರ ಜೊತೆಗೆ ಅಂದವು ಹೆಚ್ಚುತ್ತದೆ.