ಅಂಕಣ

ಕಾಂತಿಯುತ ಮುಖ ಪಡೆಯಲು ಮೊಸರಿನ ಫೇಸ್ ಪ್ಯಾಕ್ ಬಳಸಿ

ಸಾಮಾನ್ಯವಾಗಿ ಯುವತಿಯರು ಮುಖದ ಕಾಂತಿ ಕಾಪಾಡಿಕೊಳ್ಳಲು ಮತ್ತು ಹೆಚ್ಚಿಸಿಕೊಳ್ಳಲು ಮಾರ್ಕೆಟ್ ಗಳಲ್ಲಿ ಸಿಗುವಂತಹ ಸೌಂದರ್ಯ ವರ್ಧಕಗಳನ್ನು ಬಳಕೆ ಮಾಡುತ್ತಾರೆ. ಅಂತವರಿಗೆ ಇಲ್ಲಿದೆ ಸಿಂಪಲ್ ಬ್ಯೂಟಿ ಟಿಪ್ಸ್ ಗಳು. ಮೊಸರಿನ ಬಗ್ಗೆ ನಮ್ಮೆಲ್ಲರಿಗೂ ಗೊತ್ತೇ ಇದೆ. ಇದನ್ನು ಬಳಕೆ ಕೊಡ ಮಾಡುತ್ತೇವೆ. ಆದರೆ ಇದು ಕೇವಲ ತಿನ್ನೋದಕ್ಕೆ ಮಾತ್ರ ಬಳಕೆ ಆಗೋದಲ್ಲ ಜೊತೆಗೆ ಸೌಂದರ್ಯ ವರ್ಧಕ ಗುಣ ಕೂಡ ಇದರಲ್ಲಿ ಅಡಗಿದೆ. ಇದು ಮುಖದ ಹಲವಾರು ಸಮಸ್ಯೆಗಳನ್ನು ದೂರ ಮಾಡಿ ಮುಖದ ಸೌಂದರ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಿದೆ.

ಮೊಸರಿನ ಫೇಸ್ ಪ್ಯಾಕ್ ಮಾಡಲು ಒಂದು ಚಮಚ ಶ್ರೀಗಂಧದ ಹುಡಿ, ಒಂದು ಚಮಚ ಮೊಸರು, ಅರ್ಧ ಚಮಚ ಜೇನುತುಪ್ಪ ಬಳಸಿಕೊಂಡು ಒಂದು ಸಣ್ಣ ಪಾತ್ರೆಯಲ್ಲಿ ಒಂದು ಚಮಚ ಶ್ರೀಗಂಧದ ಹುಡಿ, ಒಂದು ಚಮಚ ಮೊಸರು ಮತ್ತು ಅರ್ಧ ಚಮಚ ಜೇನುತುಪ್ಪ ಹಾಕಿ. ಮಿಶ್ರಣ ಮಾಡಿ ಪೇಸ್ಟ್ ಮಾಡಿಕೊಂಡು ಮುಖ ಹಾಗೂ ಕುತ್ತಿಗೆಗೆ ಸರಿಯಾಗಿ ಹಚ್ಚಿಕೊಳ್ಳಬೇಕು. ಅರ್ಧ ಗಂಟೆ ಬಿಟ್ಟು ನೀರಿನಿಂದ ತೊಳೆಯಬೇಕು. ಇದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.

ಮೊಸರು ಹಾಗೂ ಅರಿಶಿಣದ ಫೇಸ್ ಪ್ಯಾಕ್ ಮಾಡಲು ಒಂದು ಚಮಚ ಮೊಸರು, ಒಂದು ಚಮಚ ಅರಿಶಿಣದ ಪುಡಿ ಮತ್ತು ಒಂದು ಚಮಚ ಜೇನುತುಪ್ಪವನ್ನು ಮಿಶ್ರಣ ಮಾಡಿ ಅದನ್ನು ತ್ವಚೆ ಮತ್ತು ಕುತ್ತಿಗೆಗೆ ಹಚ್ಚಿ, ಅರ್ಧ ಗಂಟೆಯ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಬೇಕು. ಹೀಗೆ ಮಾಡುವುದರಿಂದ ಮೊಡವೆ ಕ್ರಮೇಣ ಕಡಿಮೆಯಾಗಿ ಮುಖದ ಕಾಂತಿ ಹೆಚ್ಚುತ್ತದೆ.

ಕಾಫಿ ಮತ್ತು ಮೊಸರಿನ ಫೇಸ್ ಪ್ಯಾಕ್ ಮಾಡಲು ಒಂದು ಚಮಚ ಕಾಫಿ ಪುಡಿ, ಒಂದು ಚಮಚ ಮೊಸರು, ಒಂದು ಚಮಚ ಜೇನುತುಪ್ಪ ಈ ಮೂರನ್ನು ಮಿಶ್ರಣವನ್ನು ಮುಖಕ್ಕೆ ಹಚ್ಚಿ 30 ನಿಮಿಷಗಳ ಕಾಲ ಹಾಗೆ ಬಿಡಬೇಕು. ನಂತರ ಶುದ್ಧವಾದ ನೀರಿನೊಂದಿಗೆ ತೊಳೆಯಬೇಕು. ಹೀಗೆ ಮಾಡಿದರೆ ಮುಖ ಕೊಳೆ ಹೋಗಿ ಕಾಂತಿಯುತವಾಗುತ್ತದೆ.

ಟೊಮ್ಯಾಟೋ ಮತ್ತು ಮೊಸರಿನ ಫೇಸ್ ಪ್ಯಾಕ್ ಮಾಡಲು ಇವೆರಡನ್ನು ಚೆನ್ನಾಗಿ ಪೇಸ್ಟ್ ಮಾಡಿ ಒಂದೆರಡು ಹನಿ ರೋಸ್ ವಾಟರ್ ಸೇರಿಸಿ ಮುಖಕ್ಕೆ ಹಚ್ಚಿ 15 ನಿಮಿಷ ಬಿಟ್ಟು ತೊಳೆಯಬೇಕು ಇದು ಕೂಡ ಒಳ್ಳೆಯ ರಿಸಲ್ಟ್ ಕೊಡುತ್ತದೆ.

Gayathri SG

Recent Posts

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

59 seconds ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

9 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

12 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

20 mins ago

ಪಂದ್ಯದ ವೇಳೆ ಮಳೆ ಬಾರದಂತೆ ಆರ್​ಸಿಬಿ ಆಟಗಾರರಿಂದ ಕೃಷ್ಣ ನಾಮ ಜಪ

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ನಾಳೆ ನಡೆಯುವ ಮಹತ್ವದ ಪಂದ್ಯದಲ್ಲಿ ಆರ್​ಸಿಬಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದರೂ ಕೂಡ ಪಂದ್ಯಕ್ಕೆ ಮಳೆ…

28 mins ago

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

43 mins ago