News Karnataka Kannada
Friday, May 03 2024
ವಿಶೇಷ

ಇಂದು ಭಾರತದ ಕ್ರಾಂತಿಕಾರಿ ಹೋರಾಟಗಾರ “ಭಗತ್ ಸಿಂಗ್” ಜನ್ಮದಿನ

Bhagat Singhs
Photo Credit : News Kannada

ಇಂದು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 116ನೇ ಜನ್ಮದಿನ. ತನ್ನ ಧೈರ್ಯದಿಂದಲೇ ಬ್ರಿಟಿಷರ ಎದೆ ನಡುಗಿಸಿದ ಕ್ರಾಂತಿಕಾರಿ, ಮಹಾನ್ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ.

ಭಗತ್ ಸಿಂಗ್ ಅವರು ಸೆಪ್ಟೆಂಬರ್ 28, 1907 ರಲ್ಲಿ ಇಂದಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್‌ ಜಿಲ್ಲೆಯ ಬಾಂಗಾ ಗ್ರಾಮದಲ್ಲಿ ಜನಿಸಿದರು. ಭಗತ್‌ ಸಿಂಗ್‌ರ ತಂದೆ ಕಿಶನ್‌ ಸಿಂಗ್‌, ತಾಯಿ ವಿದ್ಯಾವತಿ. ತಂದೆ ಕಿಶನ್ ಸಿಂಗ್ ಜೀವ ವಿಮಾ ಕಂಪನಿಯಲ್ಲಿ ಏಜೆಂಟ್‌ ರಾಗಿ ಕೆಲಸ ಮಾಡುತ್ತಿದ್ದರು. ಭಗತ್ ಸಿಂಗ್ ಹುಟ್ಟಿದ ದಿನವೇ ಅವರ ತಂದೆ ಮತ್ತು ಅವರ ಇಬ್ಬರು ಚಿಕ್ಕಪ್ಪಂದಿರಾದ ಅಜಿತ್ ಸಿಂಗ್ ಮತ್ತು ಸ್ವರಣ್‌ ಸಿಂಗ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. ಭಗತ್ ಸಿಂಗ್ ಕುಟುಂಬಸ್ಥರು ಸದಾ ರಾಜಕೀಯ ವಲಯದಲ್ಲಿ ಸಕ್ರಿಯರಾಗಿದ್ದರು.

ಅಹಿಂಸಾವಾದದ ಬಗ್ಗೆ ಭಗತ್ ಸಿಂಗ್‌ಗೆ ಹೆಚ್ಚು ನಂಬಿಕೆ ಇರಲಿಲ್ಲ. ಮದುವೆಯಾಗಲು ನಿರಾಕರಿಸಿದ ಅವರು ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ದೆಹಲಿಯ ಸೆಂಟ್ರಲ್ ಅಸೆಂಬ್ಲಿಯಲ್ಲಿ ಬಾಂಬ್‌ ಎಸೆದ ಅವರು ಬ್ರಿಟಿಷ್ ಪೊಲೀಸರಿಗೆ ಶರಣಾದರು. ಬಾಂಬ್ ಎಸತದಿಂದ ಯಾವುದೇ ಸಾವು ನೋವು ಆಗಿರಲಿಲ್ಲ.

ಬ್ರಿಟಿಷರ ಗಮನ ಸೆಳೆದು ಸತ್ಯ ಹುಡುಕುವುದೇ ಭಗತ್ ಸಿಂಗ್ ಮತ್ತು ಅವರ ಗೆಳೆಯರಾದ ರಾಜಗುರು ಮತ್ತು ಸುಖದೇವ್‌ ಅವರ ಉದ್ದೇಶವಾಗಿತ್ತು. ಹೀಗಾಗಿ ರಿವಾಲ್ವಾರ್ ಎಸೆದು, ತಪ್ಪಿಸಿಕೊಳ್ಳುವ ಪ್ರಯತ್ನ ಕೂಡ ಮಾಡದೆ, ‘ಇಂಕ್ವಿಲಾಬ್ ಜಿಂದಾಬಾದ್’ ಎಂದು ಕೂಗುತ್ತಲೇ ಸೆರೆಯಾದರು.

ಬ್ರಿಟಿಷ್ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿದ ಆರೋಪದ ಮೇಲೆ ಅವರಿಗೆ ನೇಣು ಶಿಕ್ಷ ವಿಧಿಸಲಾಗಿತ್ತು. ಮಾರ್ಚ್ 24, 1931 ರಂದು ಅವರನ್ನು ನೇಣಿಗೇರಿಸುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಭಗತ್ ಸಿಂಗ್ ಅವರಿಗೆ ವಿಧಿಸಿರುವ ಶಿಕ್ಷಯನ್ನು ರದ್ಧು ಮಾಡಬೇಕೆಂದು ಲಾಹೋರ್ ಸೆಂಟ್ರಲ್ ಜೈಲಿನ ಎದರು ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.

ಇದನ್ನು ಅರಿತ ಬ್ರಿಟೀಷರು, ನೇಣಿಗೆರಿಸುವ ಸಮಯವನ್ನು 11 ಗಂಟೆ ಹಿಂದೂಡಿ ಮಾರ್ಚ್ 23, 1973, 7.30 ಕ್ಕೆ ಗಲ್ಲಿಗೇರಿಸಲಾಯಿತು. ಸತ್ಲೆಜ್ ನದಿಯ ದಡದಲ್ಲಿ ಜೈಲು ಅಧಿಕಾರಿಗಳೇ ರಹಸ್ಯವಾಗಿ ಅಂತ್ಯಕ್ರಿಯೆ ನೇರವೇರಿಸಿದರು.

ಇನ್ನು ಇಂದು ಈ ಸಲುವಾಗಿ ಪ್ರಧಾನಿ ಮೋದಿ ಅವರು ಭಗತ್‌ ಸಿಂಗ್‌ ಅವರ ಜನ್ಮದಿನವನ್ನು ಸ್ಮರಿಸಿ ಈ ಬಗ್ಗೆ ಒಂದು ವಿಡಿಯೋವನ್ನು ಕೂಡ ಪಧಾನಿ ಮೋದಿ ಹಂಚಿಕೊಂಡಿದ್ದಾರೆ. “ಸ್ವಾತಂತ್ರ್ಯ ಹೋರಾಟಗಾರರು ಧೈರ್ಯದ ದಾರಿದೀಪ. ಶಹೀದ್ ಭಗತ್ ಸಿಂಗ್ ಅವರ ಜನ್ಮದ ದಿನವನ್ನು ನೆನಪಿಸಿಕೊಳ್ಳುತ್ತೇನೆ ಎಂದು ಟ್ವೀಟ್​​ ಮಾಡಿದ್ದಾರೆ.

ಸ್ವಾತಂತ್ರ್ಯ ಕಾಲದಲ್ಲಿ ಅವರ ತ್ಯಾಗ ಮತ್ತು ಅಚಲವಾದ ಸಮರ್ಪಣೆ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ. ಧೈರ್ಯದ ದಾರಿದೀಪ, ಅವರು ನ್ಯಾಯ ಮತ್ತು ಸ್ವಾತಂತ್ರ್ಯಕ್ಕಾಗಿ ಭಾರತದಲ್ಲಿ ಬ್ರಿಟಷರ ವಿರುದ್ಧ ನಿರಂತರ ಹೋರಾಟದ ಮಾಡಿರುವುದು ಶಾಶ್ವತವಾಗಿ ಇರುತ್ತಾರೆ” ಎಂದು ಸವಿಸ್ಮರಣೆಯ ಶುಭಾಶಯಗಳನ್ನು ತಿಳಿಸಿದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು