News Karnataka Kannada
Friday, April 19 2024
Cricket
ವಿಶೇಷ

ಇಂದು ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ

International Day against
Photo Credit : By Author

ಡ್ರಗ್ ದುರುಪಯೋಗ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ವಿಶ್ವ ಡ್ರಗ್ ಡೇ ಎಂದೂ ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ. ಪ್ರತಿ ವರ್ಷ ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ವಿರೋಧಿ ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕವಸ್ತುಗಳು ಉಂಟುಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ.

1987 ಡಿಸೆಂಬರ್‌ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್‌ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಲಾಯಿತು.

ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. ಪ್ರತಿಯೊಬ್ಬ ನಾಗರಿಕನೂ ಈ ಬಗ್ಗೆ ಜಾಗೃತಿ ಹೊಂದಿ ವಿಶ್ವವನ್ನು ಮಾದಕವಸ್ತುಗಳಿಂದ ಮುಕ್ತವಾಗಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು