Categories: ವಿಶೇಷ

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇಂಟರ್-ಪಾರ್ಲಿಮೆಂಟರಿ ಯೂನಿಯನ್ (IPU) 1997ರ ಸೆ.15 ರಂದು ಅಂಗೀಕರಿಸಿತು. 1988 ರಲ್ಲಿ ಇದಕ್ಕೆ ಪ್ರಚಾರ ದೊರಕಿತು. ಫಿಲಿಪೈನ್ಸ್‌ನ ಅಧ್ಯಕ್ಷ ಕೊರಾಜನ್ ಸಿ. ಅಕ್ವಿನೊ ಅವರು ಹೊಸ ಮತ್ತು ಮರುಸ್ಥಾಪಿತ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನಗಳನ್ನು ಪ್ರಾರಂಭಿಸಿದರು.

2006ರಲ್ಲಿ, ಕತಾರ್‌ನಲ್ಲಿ ನಡೆದ ICNRD-6, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನು ಮರುಸ್ಥಾಪಿಸುವ ಘೋಷಣೆ ಮಾಡಲಾಯಿತು. ನಂತರ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ನಿರ್ಣಯವನ್ನು ಉತ್ತೇಜಿಸಲು ಕತಾರ್ ಮುಂದಾಳತ್ವ ವಹಿಸಿತು.

2007 ರಲ್ಲಿ ಮಂಡಿಸಿದ ನಿರ್ಣಯಕ್ಕೆ ಸಾಮಾನ್ಯ ಸಭೆಯು ಪ್ರತಿ ವರ್ಷ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆರಿಸಲು ನಿರ್ಧರಿಸಿತು.

ಪ್ರಜಾಪ್ರಭುತ್ವ ಎಂಬ ಹೆಸರು ಡೆಮೊಸ್ ಮತ್ತು ಕ್ರಾಟೋಸ್ ಎಂಬ ಎರಡು ಗ್ರೀಕ್ ಪದಗಳಿಂದ ಬಂದಿದೆ. ಡೆಮೊಸ್ ಅಂದರೆ ನಗರ-ರಾಜ್ಯದ ಪ್ರಜೆ, ಕ್ರಾಟೋಸ್ ಅಂದರೆ ಅಧಿಕಾರ ಅಥವಾ ಆಡಳಿತ. ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳು ಪ್ರಜಾಪ್ರಭುತ್ವದಡಿ ಆಡಳಿತ ನಡೆಸುತ್ತಿವೆ. ಈ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಗೌರವಿಸಲು ಪ್ರತಿವರ್ಷದ ಸೆ.15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ.

ವಿಶ್ವಸಂಸ್ಥೆಯ ಪ್ರಕಾರ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ವಿಶ್ವದಲ್ಲಿನ ಪ್ರಜಾಪ್ರಭುತ್ವದ ಸ್ಥಿತಿಯನ್ನು ತಿಳಿಯಲು ಅವಕಾಶವನ್ನು ಒದಗಿಸುತ್ತದೆ. ಪ್ರಜಾಪ್ರಭುತ್ವದ ಆದರ್ಶವನ್ನು ಎಲ್ಲರೂ, ಎಲ್ಲೆಡೆ ಪಾಲಿಸುವ ಮತ್ತು ವಾಸ್ತವಿಕವಾಗಿ ನೋಡುವಂತೆ ಮಾಡುವುದು ಈ ದಿನದ ಗುರಿಯಾಗಿದೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ಕ್ರಿಯಾತ್ಮಕ ಪ್ರಜಾಪ್ರಭುತ್ವದ ಪ್ರಾಮುಖ್ಯತೆಯನ್ನು ಅಂಗೀಕರಿಸುವ ದಿನವಾಗಿದೆ. ಇದು ಮೂಲಭೂತವಾಗಿ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳಲು ತನ್ನ ಜನರಿಗೆ ಅಧಿಕಾರ ನೀಡುತ್ತದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾದ ಭಾರತಕ್ಕೆ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವು ಆಡಳಿತ ಮಾದರಿಯ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರಮುಖ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತಿದೆ.

 

 

Ashitha S

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

6 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

11 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

29 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

31 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

35 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

45 mins ago