News Karnataka Kannada
Monday, April 29 2024
ವಿಶೇಷ

ಇಂದು ಸಜ್ಜನಿಕೆಯ ನೇತಾರ “ಲಾಲ್ ಬಹದ್ದೂರ್ ಶಾಸ್ತ್ರಿ” ಪುಣ್ಯ ಸ್ಮರಣೆ

ಪ್ರತಿವರ್ಷ ಜನವರಿ 11 ರಂದು ಭಾರತದ ಎರಡನೇ ಪ್ರಧಾನ ಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ ಅವತರ ಪುಣ್ಯ ಸ್ಮರಣೆಯನ್ನು ಆಚರಣೆ ಮಾಡಲಾಗುತ್ತದೆ. ಭಾರತ ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ. ಲಾಲ್‌ ಬಹದ್ಧೂರ್ ಶಾಸ್ತ್ರಿ ಈ ದೇಶ ಕಂಡ ಅಪ್ರತಿಮ ನಾಯಕ. ಸಜ್ಜನಿಕೆಯ ನೇತಾರ.
Photo Credit : News Kannada

ಬೆಂಗಳೂರು:  ಪ್ರತಿವರ್ಷ ಜನವರಿ 11 ರಂದು ಭಾರತದ ಎರಡನೇ ಪ್ರಧಾನ ಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ ಅವತರ ಪುಣ್ಯ ಸ್ಮರಣೆಯನ್ನು ಆಚರಣೆ ಮಾಡಲಾಗುತ್ತದೆ. ಭಾರತ ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ. ಲಾಲ್‌ ಬಹದ್ಧೂರ್ ಶಾಸ್ತ್ರಿ ಈ ದೇಶ ಕಂಡ ಅಪ್ರತಿಮ ನಾಯಕ. ಸಜ್ಜನಿಕೆಯ ನೇತಾರ.

ಲಾಲ್ ಬಹದ್ಧೂರ್ ಶಾಸ್ತ್ರಿ ಅವರು ಉತ್ತರ ಪ್ರದೇಶದ ಹಳ್ಳಿ ಮುಗಲ್ಸರಾಯಿಯಲ್ಲಿ ಅಕ್ಟೋಬರ್ 2, 1904ರಂದು ಜನಿಸಿದರು. ಅವರ ತಂದೆ ಶಾರದಾ ಪ್ರಸಾದ್ ತಾಯಿ ರಾಮದುಲಾರಿ. ಪುಟ್ಟ ಹಳ್ಳಿಯಲ್ಲಿ ಜನಿಸಿದ ಶಾಸ್ತ್ರೀಜಿ ಮುಂದೇ ದೇಶದ ಎರಡನೇ ಪ್ರಧಾನಿಯಾಗಿ ಸೇವೆಸಲ್ಲಿಸಿದರು.

ಶಾಸ್ತ್ರಿ 16 ವರ್ಷದಲ್ಲಿದ್ದಾಗ ಗಾಂಧಿ ಅವರ ಕರೆಗೆ ಓಗಟ್ಟು ಅಸಹಕಾರ ಚಳವಳಿಯಲ್ಲಿ ಪಾಲ್ಗೊಂಡರು. ನಂತರ ವಾರಣಾಸಿಯ ಕಾಶಿ ವಿದ್ಯಾಪೀಠವನ್ನು ಸೇರಿದರು. ಶಾಸ್ತ್ರಿ ಅವರು ಕೇಂದ್ರ ಸರ್ಕಾರದ ಸಂಪುಟದಲ್ಲಿ ಹಲವು ಪ್ರಮುಖ ಇಲಾಖೆಗಳನ್ನು ನಿಭಾಯಿಸಿದ್ದರು. ಅವರು ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ರೈಲು ದುರಂತವೊಂದು ಸಂಭವಿಸಿ ಅನೇಕರು ಪ್ರಾಣ ಕಳೆದುಕೊಂಡರು. ಅದರ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಇನ್ನು ರಾಜಕೀಯ ಜೀವನದಲ್ಲಿ ಪ್ರಮುಖ ಕಾತೆಗಳನ್ನು ಹೊಂದಿದ್ದ ಅವರು, 1964ರ ಜೂನ್ ನಿಂದ 1966 ಜನವರಿ ವರೆಗೆ ದೇಶದ ಎರಡನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಭಾರತದ ರಾಜಕೀಯ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಶಾಸ್ತ್ರಿ ಅವರು, ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಹೊಳಪು ನೀಡಿದವರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಿ ಆಗಿ ಆಡಳಿತ ನಡೆಸಿದ್ದು ಕೇವಲ 18 ತಿಂಗಳು ಮಾತ್ರ. ಅಷ್ಟುಸಣ್ಣ ಅವಧಿಯಲ್ಲೇ ಪಾಕಿಸ್ತಾನದೊಂದಿಗಿನ ಯುದ್ಧದಲ್ಲಿ ದೇಶವನ್ನೂ ಮುನ್ನಡೆಸಿದರು. ದೇಶದಲ್ಲಿನ ಆಹಾರ ಕೊರತೆಯಯನ್ನು ನೀಗಿಸಿದರು.

ಅಷ್ಟೇ ಅಲ್ಲ್ದೇ ಶಾಸ್ತ್ರೀಜಿ ಪ್ರಧಾನಿಯಾಗಿದ್ದಾಗ ನೆರೆಯ ಚೀನಾದ ಕ್ಯಾತೆಗೆ ಬಗ್ಗಲಿಲ್ಲ. ವಿಶ್ವಸಂಸ್ಥೆಯ ಒತ್ತಡಕ್ಕೂ ಮಣಿಯಲಿಲ್ಲ. ಅಮೆರಿಕದ ಬೆದರಿಕೆಗೆ ಕ್ಯಾರೇ ಎನ್ನಲಿಲ್ಲ. ಕೊನೆಗೆ ಶಾಂತಿ ಮಂತ್ರ ಜಪಿಸುತ್ತಲೇ ತಾಷ್ಕೆಂಟಿಗೆ ಹೋಗಿ ಅಲ್ಲಿ ತಮ್ಮ ಜೀವವನ್ನೇ ಬಲಿಕೊಟ್ಟರು. ಬಡತನದಲ್ಲೇ ಹುಟ್ಟಿ, ಬಡತನದಲ್ಲೇ ಬೆಳೆದು, ಬಡತನದಲ್ಲೇ ನಿಧನರಾಧ ಭಾರತದ ಏಕೈಕ ಪ್ರಧಾನಿ ಲಾಲ್ ಬಹದ್ಧೂರ್ ಶಾಸ್ತ್ರಿ ಅವರು.

ಭಾರತದ ಸಮಗ್ರತೆ ಹಾಗೂ ರಾಷ್ಟ್ರ ಧ್ವಜದ ಗೌರವ ಕಾಪಾಡಲು ನಮ್ಮ ಬದುಕಿನ ಕೊನೆಯ ಕ್ಷಣದ ವರೆಗೂ ಹೋರಾಡುತ್ತೇವೆ. ಈ ವಿಷಯದಲ್ಲಿ ನಾವು ಸಾವಿಗೂ ಅಂಜುವುದಿಲ್ಲ ಎಂದಿದ್ದರು. ಜೈ ಜವಾನ್, ಜೈ ಕಿಸಾನ್ ಎಂಬುದು ಅವರ ಪ್ರಮುಖ ಗೋಷವಾಕ್ಯವಾಗಿದೆ. ಉಜ್ಜೇಕಿಸ್ತಾನದ ತಾಷ್ಕೆಂಟ್‌ನಲ್ಲಿ ಜನವರಿ 11, 1966 ರಂದು ಶಾಸ್ತ್ರೀಜಿ ಅಕಾಲಿಕವಾಗಿ ನಿಧನರಾದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು