ಡೆಂಗ್ಯೂ ಜ್ವರದತ್ತ ಎಚ್ಚರ ವಹಿಸುವುದು ಅಗತ್ಯ!

ಈ ಬಾರಿ ಡೆಂಗ್ಯೂ ಹೆಚ್ಚಿನ ಜನರನ್ನು ಕಾಡುತ್ತಿದೆ. ಹೀಗಾಗಿ ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಮಳೆ ಸುರಿಯುತ್ತಿದ್ದರೂ ಕೂಡ ಅಲ್ಲಲ್ಲಿ ಮಳೆ ನೀರು ನಿಂತು ಡೆಂಗ್ಯೂ ಹರಡುವ ಸೊಳ್ಳೆಯ ಉತ್ಪತ್ತಿಗೆ ಕಾರಣವಾಗುತ್ತಿದೆ.

ಡೆಂಗ್ಯೂ ಈಡಿಸ್ ಈಜಿಪ್ಟೆ ಸೊಳ್ಳೆಗಳಿಂದ ಹರಡುತ್ತದೆ. ಇದನ್ನು ಮೂಳೆಮುರಕ ಅಥವಾ ಬ್ರೇಕ್‌ಬೋನ್ ಜ್ವರವೆಂದು ಕೂಡ ಕರೆಯಲಾಗುತ್ತದೆ. ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಕ್ಕಳು ಮತ್ತು ವಯಸ್ಕರನ್ನು ಬೇಗ ಬಾಧಿಸುತ್ತದೆ. ಈಡಿಸ್ ಈಜಿಪ್ಟ್ಟೆ ಎಂಬ ಸೊಳ್ಳೆ ಕಚ್ಚಿದ ಮೂರರಿಂದ ಹದಿನಾಲ್ಕು ದಿನಗಳ ನಂತರ ವ್ಯಕ್ತಿಯಲ್ಲಿ ರೋಗ ಉಲ್ಭಣವಾಗಿ ರೋಗದ ಲಕ್ಷಣಗಳು ಹೊರಗೆ ಕಾಣಿಸಿಕೊಳ್ಳುತ್ತದೆ. ಹೆಣ್ಣು ಸೊಳ್ಳೆಯು ಸೋಂಕಿಗೆ ತುತ್ತಾಗದ ವ್ಯಕ್ತಿಯನ್ನು ಕಚ್ಚಿದಲ್ಲಿ, ಆ ಸೊಳ್ಳೆಯ ಜೊಲ್ಲಿನ ಮೂಲಕ ವೈರಸ್ ವ್ಯಕ್ತಿಯ ದೇಹವನ್ನು ಪ್ರವೇಶಿಸಿ ದೇಹದಲ್ಲಿನ ಬಿಳಿ ರಕ್ತಕಣದೊಂದಿಗೆ ಸೇರಿಕೊಂಡು, ಬಿಳಿ ರಕ್ತ ಕಣಗಳಲ್ಲಿ ದ್ವಿಗುಣಗೊಳ್ಳುತ್ತಾ ಸಾಗುತ್ತದೆ.

ಈ ದ್ವಿಗುಣಗೊಳ್ಳುವಿಕೆಯು ಡೆಂಗ್ಯೂ ರೋಗದ ರೋಗ ಲಕ್ಷಣವಾಗಿರುತ್ತದೆ. ಒಮ್ಮೆ ಈ ವೈರಸ್‌ಗಳ ಸಂಖ್ಯೆ ಬಿಳಿ ರಕ್ತಕಣಗಳಲ್ಲಿ ಹೆಚ್ಚಾದರೇ, ಲಿವರ್ (ಯಕೃತ್ತು) ಮತ್ತು ಮೂಳೆಯ ಮಜ್ಜೆ (ಬೋನ್ ಮ್ಯಾರೋ) ಮುಂತಾದ ಅಂಗಾಂಶಗಳ ಕಾರ್ಯನಿರ್ವಹಣೆಯ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗುತ್ತದೆ. ಕೊನೆಗೆ ಇದು ದೇಹದಲ್ಲಿರುವ ಕಿರುತಟ್ಟೆಗಳ ಅಥವಾ ಕಿರುಬಿಲ್ಲೆಗಳ (ಪ್ಲೇಟ್‌ಲೆಟ್) ಸಂಖ್ಯೆಯನ್ನು ಕಡಿಮೆ ಮಾಡುತ್ತಾ ಹೋಗುತ್ತದೆ. ಆಗ ಕಾಯಿಲೆ ಉಲ್ಭಣವಾಗುತ್ತಾ ಹೋಗುತ್ತದೆ.

ಈ ವೇಳೆ ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು ಕಾಣಿಸಿಕೊಂಡು ವ್ಯಕ್ತಿಯು ಸಂಪೂರ್ಣ ಕುಸಿದು ಬಿಡುತ್ತಾನೆ. ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು ೧೦೪ಡಿಗ್ರಿ ವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಕಾಣಿಸಿಕೊಳ್ಳುತ್ತದೆ.

ವ್ಯಕ್ತಿಯನ್ನು ಬಾಧಿಸಿರುವುದು ಡೆಂಗ್ಯೂ ಎಂಬುದು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಲಾಗುತ್ತದೆ. ಕ್ಷಣಕ್ಷಣಕ್ಕೂ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದು ಕಂಡು ಬಂದರೆ ಅದು ಡೆಂಗ್ಯೂ ಎಂಬುದನ್ನು ಖಾತರಿಪಡಿಸುತ್ತದೆ.

ಡೆಂಗ್ಯೂಗೆ ಚಿಕಿತ್ಸೆ ನೀಡಲಾಗುತ್ತದೆಯಾದರೂ ಕೆಲವೊಮ್ಮೆ ಅವಧಿ ಮೀರಿದರೆ ಜೀವಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಹೀಗಾಗಿ ಸೊಳ್ಳೆಗಳಿಂದ ದೂರ ಇರುವುದು ಮತ್ತು ಸೊಳ್ಳೆಗಳು ಉತ್ಪತ್ತಿಯಾಗದಂತಹ ಪರಿಸರ ನಿರ್ಮಾಣ ಮಾಡುವುದು, ಸೊಳ್ಳೆಗಳು ಕಚ್ಚದಂತೆ ಸೊಳ್ಳೆ ನಿವಾರಕ, ಸೊಳ್ಳೆ ಪರದೆಗಳನ್ನು ಬಳಸುವುದು ಮುಖ್ಯವಾಗಿದೆ.

ಮನೆಯ ಸುತ್ತ ಚರಂಡಿ ಸೇರಿದಂತೆ ಇತರೆ ಪ್ರದೇಶಗಳಲ್ಲಿ, ಬಕೆಟ್, ಟಯರ್, ಎಳನೀರು ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳು ಇರುವ ಪ್ರದೇಶಗಳಲ್ಲಿ ಫಾಗಿಂಗ್ ಮಾಡಬೇಕು. ಗಪ್ಪಿ ಮೀನನ್ನು ತೊಟ್ಟಿಗಳಲ್ಲಿ ಬಿಡುವುದರಿಂದಲೂ ಸೊಳ್ಳೆಗಳನ್ನು ನಾಶ ಮಾಡಬಹುದಾಗಿದೆ. ಈ ಮೀನುಗಳು ಸೊಳ್ಳೆ ಹಾಗೂ ಸೊಳ್ಳೆಯ ಮೊಟ್ಟೆಯಲ್ಲದೆ ಪಾಚಿಯನ್ನು ತಿನ್ನುವ ಗುಣವನ್ನು ಹೊಂದಿವೆ. ಹೀಗಾಗಿ ಡೆಂಗ್ಯೂ ರೋಗಕ್ಕೆ ಕಾರಣವಾಗುವ ಈಡಿಸ್ ಈಜಿಪ್ಟೆ ಸೊಳ್ಳೆಗಳು ಮೊಟ್ಟೆಯಿಟ್ಟಾಗ ಅವುಗಳನ್ನು ತಿಂದು ನಾಶಮಾಡುತ್ತವೆ. ಇದರಿಂದ ಸೊಳ್ಳೆಗಳ ಸಂತಾನೋತ್ಪತ್ತಿ ಕಡಿಮೆಯಾಗುತ್ತದೆ.

ಇವತ್ತಿನ ಪರಿಸ್ಥಿತಿಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಅನಿವಾರ್ಯವಾಗಿದೆ. ಜತೆಗೆ ಕಾಯಿಲೆಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಮನೆ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು. ಮನೆಯಲ್ಲಿ ಫ್ರಿಡ್ಜ್ ಇದ್ದರೆ ಅದರ ಹಿಂದೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಕೆಲವೊಮ್ಮೆ ಅಲ್ಲಿಯೂ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುವ ಅವಕಾಶ ವಿರುತ್ತದೆ ಆದ್ದರಿಂದ ಎಚ್ಚರಿಕೆ ಅಗತ್ಯ. ಇದೆಲ್ಲದರ ನಡುವೆ ಜ್ವರ ಕಾಣಿಸಿಕೊಂಡಾಗ ಮಾತ್ರೆ ನುಂಗುವ ಬದಲಿಗೆ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆ ಪಡೆಯುವುದು ಬಹು ಮುಖ್ಯವಾಗಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago