News Karnataka Kannada
Thursday, May 02 2024
ಪರಿಸರ

ಬೆಳ್ತಂಗಡಿ: ವಿಶ್ವ ಪರಿಸರ ದಿನದ ಅಂಗವಾಗಿ ಗಿಡಗಳನ್ನು ನೆಡಲಾಯಿತು

Belth
Photo Credit :

ಬೆಳ್ತಂಗಡಿ: ವಿಶ್ವ ಪರಿಸರ ದಿನದ ಅಂಗವಾಗಿ ಆದಿತ್ಯವಾರ ಬಡಗಕಾರಂದೂರು ಉನ್ನತೀಕರಿಸಿದ ಸ.ಹಿ.ಪ್ರಾ.ಶಾಲೆಯ ಆವರಣದಲ್ಲಿ ಅಳದಂಗಡಿ ವಲಯದ ವಿಪತ್ತು ನಿರ್ವಹಣಾ ಘಟಕದಿಂದ ಗಿಡಗಳನ್ನು ನೆಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಎನ್, ಶಿಕ್ಷಕಿ ಮಂಗಳಾ ಕೆ, ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಆನಂದ, ಸದಸ್ಯ ಸುರೇಂದ್ರ ಜೈನ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜಯವಂತ ಪಟಗಾರ್ ಗಿಡ‌ನೆಟ್ಟು ನೀರೆರೆದರು.

ವಲಯ ಸಂಯೋಜಕ ಶ್ರೀಕಾಂತ ಪಟವರ್ಧನ್, ಶ್ರೀಕ್ಷೇತ್ರ ಧ.ಗ್ರಾ.ಯೋ.ಯ ವಲಯಾಧ್ಯಕ್ಷ ಪ್ರತಾಪ, ಅನ್ಯಾನ್ಯ ಒಕ್ಕೂಟ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು, ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಒಟ್ಟು 20 ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು