ಹೊಸದಿಲ್ಲಿ: 27 ರಾಜ್ಯಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ

ಹೊಸದಿಲ್ಲಿ: 27 ರಾಜ್ಯಗಳ 269 ಜಿಲ್ಲೆಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಸಾರವರ್ಧಿತ ಅಕ್ಕಿ ವಿತರಿಸಲು ಪ್ರಾರಂಭಿಸಿವೆ, ಸಾರವರ್ಧಿತ ಅಕ್ಕಿ ಬಲವರ್ಧನೆ ಕಾರ್ಯಕ್ರಮದಲ್ಲಿ ಮಾರ್ಚ್ 2023 ರ ವೇಳೆಗೆ ಎರಡನೇ ಹಂತಕ್ಕೆ 100 ಪ್ರತಿಶತ ಗುರಿಯನ್ನು ಸಾಧಿಸಲಾಗಿದೆ ಎಂದು ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೋಪ್ರಾ, ಎರಡನೇ ಹಂತದಲ್ಲಿ ಸುಮಾರು 105 ಲಕ್ಷ ಮೆಟ್ರಿಕ್ ಟನ್ ಸಾರವರ್ಧಿತ ಅಕ್ಕಿಯನ್ನು ಖರೀದಿಸಲಾಗಿದೆ. ಪಿಡಿಎಸ್ ಅಕ್ಕಿಯನ್ನು 27 ರಾಜ್ಯಗಳಿಗೆ ನೀಡಲಾಗುವುದು. ಅಲ್ಲದೆ ರಾಜ್ಯಗಳಿಂದ ಸುಮಾರು 29 ಲಕ್ಷ ಮೆಟ್ರಿಕ್ ಟನ್‌ ಅಕ್ಕಿ ಖರೀದಿಸಲಾಗಿದೆ. ಜೊತೆಗೆ ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ (ಐಸಿಡಿಎಸ್) ಮತ್ತು ಪಿಎಂ ಪೋಶಣ್‌ ಕಾರ್ಯಕ್ರಮಕ್ಕಾಗಿ ಎರಡನೇ ಹಂತದಲ್ಲಿ 2022-23 ರಲ್ಲಿ 134 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬಳಸಲಾಗಿದೆ ಎಂದು ತಿಳಿಸಿದ್ದಾರೆ. ಮೂರನೇ ಹಂತದ ಅಡಿಯಲ್ಲಿ, ಗೋಧಿ ಸೇವಿಸುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯಲ್ಲಿ 2024 ಮಾರ್ಚ್ ಅಕ್ಕಿ ವಿತರಣೆಗೆ ಗುರಿ ನಿಗದಿ ಮಾಡಲಾಗಿದೆ ಎಂದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

3 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

3 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

3 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

4 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago