News Karnataka Kannada
Wednesday, May 01 2024
ವಿಶೇಷ

ಸೆಪ್ಟೆಂಬರ್​ 27: ಇಂದು ವಿಶ್ವ ಪ್ರವಾಸೋದ್ಯಮ ದಿನ

world tourism day
Photo Credit : Freepik

ಇಂದು ವಿಶ್ವ ಪ್ರವಾಸೋದ್ಯಮ ದಿನ. ಹೀಗಾಗಿ ವಿವಿಧ ಪ್ರದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ವಾತಾವರಣವನ್ನು ತಿಳಿದುಕೊಳ್ಳವವರ ಪಾಲಿಗೆ ಈ ದಿನ ಒಂದು ರೀತಿಯಲ್ಲಿ ಸೆಲಿಬ್ರೇಶನ್​ ಅಂತಾ ಹೇಳಿದ್ರೆ ತಪ್ಪಾಗೋದಿಲ್ಲ.

ವಿಶ್ವಸಂಸ್ಥೆಯ ವರ್ಲ್ಡ್‌ ಟೂರಿಸಂ ಆರ್ಗನೈಜೇಷನ್‌(ಯುಎನ್‌ಡಬ್ಲ್ಯುಟಿಒ) 1970 ಸೆಪ್ಟೆಂಬರ್‌ 27ರಂದು ಮೊದಲ ಬಾರಿಗೆ ವಿಶ್ವ ಪ್ರವಾಸೋದ್ಯಮ ದಿನ ಆಚರಿಸಲು ಶಾಸನಗಳನ್ನು ರಚಿಸಿತು.

ಯುಎನ್‌ಡಬ್ಲ್ಯುಟಿಒ 1980 ಸೆಪ್ಟೆಂಬರ್‌ 27ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲು ಗೊತ್ತುವಳಿ ಅಂಗೀಕರಿಸಿತು. ಪ್ರವಾಸೋದ್ಯಮವನ್ನು ಜಾಗತಿಕವಾಗಿ ಪ್ರಚಾರಗೊಳಿಸುವ ಉದ್ದೇಶದಿಂದ ಈ ದಿನವನ್ನು ಆರಂಭಿಸಲಾಗಿದೆ. ಅಂದಿನಿಂದ ಪ್ರತಿ ವರ್ಷ ಆ ದಿನದಂದು ಪ್ರವಾಸೋದ್ಯಮ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಭಾರತದಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿವೆ. ಪ್ರತಿರಾಜ್ಯದಲ್ಲಿಯೂ ಪ್ರವಾಸಿ ತಾಣಗಳು ಸಾಕಷ್ಟಿವೆ. ಇವುಗಳನ್ನು ಪ್ರವಾಸಿಸ್ನೇಹಿಯಾಗಿ ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಬೇಕಿದೆ. ಕರ್ನಾಟಕದಲ್ಲಿ ಹಲವು ಪ್ರದೇಶಗಳು ಪ್ರವಾಸಿಗರನ್ನು ಸೆಳೆಯಲು ಸೂಕ್ತವಾಗಿದ್ದರೂ ಕೆಲವೇ ಪ್ರದೇಶಗಳಿಗೆ ಮಾತ್ರ ಮಹತ್ವ ನೀಡಲಾಗಿದೆ.

ಭಾರತದಲ್ಲಿ ಪ್ರವಾಸೋದ್ಯಮವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸುತ್ತಿದೆ. ಇದು ವಿದೇಶಿ ವಿನಿಮಯದ ಎರಡನೇ ಅತಿದೊಡ್ಡ ಗಳಿಕೆಯಾಗಿದೆ. ಪ್ರವಾಸೋದ್ಯಮ ಕ್ಷೇತ್ರ ಕೌಶಲ ಮತ್ತು ಕೌಶಲರಹಿತವುಳ್ಳ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಒದಗಿಸಿದೆ.

ಈ ವರ್ಷ ವಿಶ್ವ ಪ್ರವಾಸೋದ್ಯಮ ದಿನದ ಥೀಮ್​, ʼಪ್ರವಾಸೋದ್ಯಮ ಹಾಗೂ ಹಸಿರು ಹೂಡಿಕೆಗಳುʼ ಎಂದಾಗಿದೆ. ಪ್ರವಾಸೋದ್ಯಮ ಬೆಳೆಯಬೇಕು ಅಂದರೆ ಹೂಡಿಕೆ ಮಾಡುವುದು ಕೂಡ ಅಷ್ಟೇ ಮುಖ್ಯ ಅನ್ನೋದು UNWTO ಅಭಿಪ್ರಾಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು