ವಿಶೇಷ

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ

ಚಾಮರಾಜನಗರ: ತಾಲೂಕಿನ ಬಂಡೀಪುರ ಉದ್ಯಾನವನದ ವನಸಿರಿಯಲ್ಲಿ ಬೆರೆತು ಸದಾ ಹಿಮದಿಂದ ಕೂಡಿದ ವಾತಾವರಣದಲ್ಲಿರುವ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆಯಿಡುತ್ತಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸಫಾರಿಯಲ್ಲಿ ಕಾಣದ ಪ್ರಾಣಿ ಪಕ್ಷಿಗಳು ಬೆಟ್ಟದ ತಪ್ಪಲಿನ ಗೇಟ್ ನಿಂದ ಗೋಪಾಲಸ್ವಾಮಿ ಬೆಟ್ಟದವರೆಗೆ ಸಾಗುವ ವೇಳೆ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದು ಇದರಿಂದ ಇದೊಂದು ರೀತಿಯ ಸಫಾರಿ ಮಾಡಿದ ಅನುಭವ ನೀಡುತ್ತಿದೆ.

ಇತ್ತೀಚಿಗಷ್ಟೇ ಹುಲಿ, ಚಿರತೆ, ಕರಡಿ, ಜಿಂಕೆಗಳು ಮತ್ತು ಆನೆಗಳಂತೂ ಪ್ರತಿದಿನ ದೇವರ ದರ್ಶನ ಪಡೆದು ಹೋಗುವುದು ಮಾಮೂಲಿಯಾಗಿದೆ ಅದನ್ನು ಪ್ರವಾಸಿಗರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಲು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ದಾರಿ ಉದ್ದಕ್ಕೂ ಆನೆಗಳ ದಂಡೇ ರಸ್ತೆ ಪಕ್ಕದಲ್ಲಿ ಅಡ್ಡಾಡುತ್ತಾ ಸಾಗುತ್ತಿದ್ದ ದೃಶ್ಯಗಳು ಕಂಡು ಬಂದಿದ್ದು, ಇದು ಮೈನವಿರೇಳಿಸುತ್ತಿದೆ. ಇದರ ನಡುವೆ ಹುಲಿಯೊಂದು ಓಡುವ ದೃಶ್ಯ ಗಮನಸೆಳೆದಿದೆ.

ಇದೆಲ್ಲದರ ನಡುವೆ ಇದೀಗ ಎಲ್ಲಿ ನೋಡಿದರೂ ಹಸಿರು ಹಚ್ಚಡದ ಸುಂದರ ಪ್ರಕೃತಿ ನಮಗೆ ಖುಷಿ ಕೊಡುತ್ತದೆ. ಅದರಲ್ಲೂ ಈಗ ಹಿಮಮಳೆಗೆರೆಯುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯವಂತು ಇಮ್ಮಡಿಗೊಂಡಿದ್ದು ನಿಸರ್ಗದ ಸುಂದರ ನೋಡ ಪ್ರಕೃತಿ ಪ್ರೇಮಿಗಳನ್ನು ಮೂಕಸ್ಮಿತರನ್ನಾಗಿಸುತ್ತಿದೆ. ಎಲ್ಲೆಂದರೆಲ್ಲಿ ಹರಡಿ ನಿಂತ ಗಿರಿಶಿಖರಗಳು.. ಸಣ್ಣಗೆ ಸುರಿಯುವ ಹಿಮಮಳೆ.. ಒಬ್ಬರಿಗೊಬ್ಬರು ಕಾಣಿಸದಷ್ಟು ದಟ್ಟವಾಗಿ ಹರಡಿ ನಿಲ್ಲುವ ಮಂಜು.. ಅದರಾಚೆಗೆ ಸುಯ್ಯೆಂದು ಬೀಸುವ ಗಾಳಿಗೆ ತಲೆದೂಗುವ ಗಿಡಮರಗಳು.. ಆಗೊಮ್ಮೆ ಈಗೊಮ್ಮೆ ಮೌನವನ್ನು ಸೀಳಿಕೊಂಡು ಬರುವ ದೇಗುಲದ ಗಂಟೆಯ ನಿನಾದ ಸುಂದರ, ನೆಮ್ಮದಿಯ ಅನುಭವವನ್ನು ನೀಡುತ್ತದೆ.

ಇಲ್ಲಿನ ಹಂಗಳ ಗ್ರಾಮದಿಂದ ಮುಂದಕ್ಕೆ ರಸ್ತೆಯಲ್ಲಿ ಸಾಗುತ್ತಿದ್ದರೆ ಆಕಾಶ ಭೂಮಿಯನ್ನು ಒಂದಾಗಿಸಿದಂತೆ ಕಾಣುವ ಮೋಡಗಳ ಆಟ, ಜೇನುಹುಳುಗಳ ಝೇಂಕಾರ… ಹಕ್ಕಿಗಳ ಇಂಚರ.. ಎಲ್ಲವೂ ಮುಂದೆ ಸಾಗಲು ಪ್ರೇರಣೆ ನೀಡುತ್ತವೆ. ಇನ್ನು ಸುಮಾರು ೧೪೫೦ ಅಡಿ ಎತ್ತರದ ಈ ಬೆಟ್ಟದಲ್ಲಿ ಶ್ರೀ ಗೋಪಾಲಸ್ವಾಮಿ ನೆಲೆನಿಂತಿದ್ದು, ಕೊಳಲೂದುವ ಶ್ರೀಕೃಷ್ಣನ ಮೂರ್ತಿ ಆಕರ್ಷಕವಾಗಿದೆ. ಇಲ್ಲಿಗೆ ಸಾಮಾನ್ಯವಾಗಿ ಆಸ್ತಿಕರು-ನಾಸ್ತಿಕರನ್ನೆದೆ ಎಲ್ಲರೂ ಬರುತ್ತಾರೆ. ಹೀಗಾಗಿ ಇದೊಂದು ರೀತಿಯಲ್ಲಿ ಚಾರಣ ಪ್ರಿಯರಿಗೆ ಹುರುಪಿನ ತಾಣವಾಗಿಯೂ, ನಿಸರ್ಗ ಪ್ರೇಮಿಗಳಿಗೆ ಮುದ ನೀಡುವ, ಭಕ್ತರಿಗೆ ಇಷ್ಟಾರ್ಥ ನೆರವೇರಿಸುವ ಕ್ಷೇತ್ರವಾಗಿದೆ ಎಂದರೆ ತಪ್ಪಾಗಲಾರದು.

ಪ್ರತಿವರ್ಷವೂ ಬೇಸಿಗೆ ಕಳೆದು ಮುಂಗಾರು ಆರಂಭವಾಗುತ್ತಿದ್ದಂತೆಯೇ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸೌಂದರ್ಯ ಇಮ್ಮಡಿಯಾಗುವುದರೊಂದಿಗೆ ಹಿಮಮಳೆಯ ಸುಂದರ ವಾತಾವರಣ ಸೃಷ್ಟಿಯಾಗಿಬಿಡುತ್ತದೆ. ಹೀಗಾಗಿ ಈ ಸಮಯದಲ್ಲಿ ಸದಾ ಒತ್ತಡಗಳಿಂದ ಕೂಡಿದ ಜೀವನ ನಡೆಸುವವರು, ಪೇಟೆ, ಪಟ್ಟಣಗಳ ಗೌಜುಗದ್ದಲಗಳಲ್ಲಿ ಬದುಕು ಕಟ್ಟಿಕೊಂಡವರು ತಮ್ಮ ವಾರದ ರಜಾ ದಿನಗಳನ್ನು ಕಳೆಯಲು ಇಲ್ಲಿಗೆ ಹೆಚ್ಚಾಗಿ ಬರುತ್ತಿದ್ದಾರೆ.

Sneha Gowda

Recent Posts

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

1 min ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

18 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

45 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

54 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

1 hour ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

1 hour ago