ರಾಜಕಾರಣಿಗಳ ದುಷ್ಟ ಯೋಜನೆ ಬಯಲಿಗೆ ಬತ್ತಿದ ನೇತ್ರಾವತಿಯಲ್ಲಿ ಕ್ರಿಕೆಟ್‌ ಪಂದ್ಯಾಟ ಆಯೋಜನೆ

ಉಪ್ಪಿನಂಗಡಿ: ಜಿಲ್ಲೆಯ ಜೀವನದಿ ನೇತ್ರಾವತಿಯು ಉಪ್ಪಿನಂಗಡಿಯಲ್ಲಿ ಬತ್ತಿಹೋಗಿದ್ದು, ಜೀವನದಿಗಳನ್ನು ಬರಡಾಗಿಸುವ ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಭಾನುವಾರ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಎನ್‌ಇಸಿಎಫ್‌ ವತಿಯಿಂದ ಎತ್ತಿನಹೊಳೆ ಪ್ರೀಮಿಯರ್‌ ಲೀಗ್‌ ಅಣಕು ಕ್ರಿಕೆಟ್‌ ಪಂದ್ಯಾಟ ಆಯೋಜಿಸಲಾಗಿತ್ತು.

ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ನೀರು ಅನವಶ್ಯಕವಾಗಿ ಕಡಲು ಸೇರುತ್ತಿದೆ ಎಂದು ಪ್ರತಿಪಾದಿಸಿ ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯ್ಲಿ ಅವಧಿಯಲ್ಲಿ ಎತ್ತಿನಹೊಳೆ ಯೋಜನೆ ಮಂಜೂರುಗೊಳಿಸಿದ್ದರು.

ಇದೀಗ ನೀರಾವರಿ ಯೋಜನೆ ಪೂರ್ಣಗೊಂಡಿಲ್ಲ. ಅಲ್ಲದೆ ಎತ್ತಿನ ಹೊಳೆ ಜಲಪಾತ್ರಗಳೆಲ್ಲವೂ ಬರಿದಾಗಿದ್ದು, ಮಳೆಗಾಲದಲ್ಲಿ ಭೂಕುಸಿತ, ಪ್ರಕೃತಿ ವಿಕೋಪಕ್ಕೆ ಕಾರಣವಾಗುತ್ತಿದೆ. ಅತ್ತ ಕೋಲಾರ, ಚಿತ್ರದುರ್ಗ ಸೇರಿದಂತೆ ಬಯಲು ಸೀಮೆ ಯಾವುದೇ ಪ್ರದೇಶಗಳಿಗೂ ನೀರು ತಲುಪಿಲ್ಲ. ಆದರೆ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು, ಗುತ್ತಿಗೆದಾರ ಜೇಬು ತುಂಬಿದೆ ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಬುದ್ದಿವಂತ ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸ ಎಂದು ನ್ಯಾಷನಲ್‌ ಎನ್ವಿರಾನ್‌ಮೆಂಟ್‌ ಕೇರ್‌ ಫೌಂಡೇಶನ್‌ ಸಂಸ್ಥೆ ಮುಖ್ಯಸ್ಥ ದಿನೇಶ್‌ ಹೊಳ್ಳ ಹೇಳಿದರು.

ಸಂಸ್ಥೆಯ ಶಶಿಧರ ಶೆಟ್ಟಿ ಮಾತನಾಡಿ ಪ್ರಾಕೃತಿಕವಾಗಿ ದೊರೆಯುವ ಶುದ್ದ ನೀರಿನ ಮೂಲಗಳನ್ನು ಕೊಳಚೆ ಮಾಡಿ ಸಮುದ್ರದ ಉಪ್ಪು ನೀರನ್ನು ಸಿಹಿನೀರನ್ನಾಗಿಸುವ ದುಬಾರಿ ಯೋಜನೆ ಬಗ್ಗೆ ಸರ್ಕಾರಕ್ಕೆ ಆಸಕ್ತಿ ವಹಿಸಿರುವುದು ವಿಪರ್ಯಾಸ. ಈ ನಿಟ್ಟಿನಲ್ಲಿ ಜೀವನದಿಯ ಸ್ಥಿತಿಗೆ ಕಾರಣವಾದವರನ್ನು ಸಮಾಜಕ್ಕೆ ತಿಳಿಯಪಡಿಸುವ ಉದ್ದೇಶದಿಂದ ಕ್ರಿಕೆಟ್‌ ಪಂದ್ಯಾಟ ಆಯೋಜಿಸಲಾಗಿದೆ ಎಂದರು.

ವೀರಪ್ಪ ಸದಾನಂದ ಕ್ರೀಡಾಂಗಣದಲ್ಲಿ ರಾಜಕಾರಣಿಗಳ ಮುಖವಾಡ ಬಯಲು:
ಎತ್ತಿನ ಹೊಳೆ ಯೋಜನೆಯನ್ನು ಪರಿಚಯಿಸಿದ ವೀರಪ್ಪ ಮೊಯ್ಲಿ ಮತ್ತು ಡಿ.ವಿ ಸದಾನಂದ ಗೌಡ ಅವರನ್ನು ಅಣಕಿಸುವಂತೆ ನೀರಿನ ಹರಿವು ಇಲ್ಲದೆ ಒಣಗಿದ ನದಿ ಬಯಲಿನಲ್ಲಿ ಕ್ರಿಕೆಟ್‌ ಪಂದ್ಯಾಟ ಆಯೋಜಿಸಲಾಯಿತು. ನದಿ ಬಯಲಿಗೆ ವೀರಪ್ಪ ಸದಾನಂದ ಕ್ರೀಡಾಂಗಣವೆಂದು ನಾಮಕರಣ ಮಾಡಲಾಯಿತು. ಎಲ್ಲ ರಾಜಕೀಯ ಪಕ್ಷಗಳ ವಿವಿಧ ರಾಜಕಾರಣಿಗಳ ಮುಖವಾಡ ಧರಿಸಿ ಕ್ರಿಕೆಟ್‌ ಆಡಲಾಯಿತು. ಬಳಿಕ ಬಹುಮಾನವಾಗಿ ಬಕೆಟ್‌ ನೀರನ್ನು ನೀಡಲಾಯಿತು.

ಪರಿಸರ ಆಸಕ್ತರು, ಸಂಘಟನೆ ಪ್ರಮುಖರಾದ ಭುವನ್‌, ಬೆನಡಿಕ್ಟ್‌ ಫೆರ್ನಾಂಡಿಸ್‌, ಜೀತ್‌ ಮಿಲನ್‌ ರೋಚ್‌, ನಾಗರಾಜ್‌, ಸೆಲ್ಮಾ, ಜಯಪ್ರಕಾಶ್‌, ಮಧುಸೂಧನ್‌, ಹರೀಶ್‌ ರಾಜ್‌ಕುಮಾರ್‌, ಅವಿನಾಶ್‌ ಭಿಡೆ, ಇರ್ಷಾದ್‌ ಮೊದಲಾದವರಿದ್ದರು.

Gayathri SG

Recent Posts

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

2 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

8 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

24 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

40 mins ago

ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದ ಅಣ್ಣಾಮಲೈ

ಸ್ಯಾಮ್ ಪಿತ್ರೋಡಾ ಅವರ ಜನಾಂಗೀಯ ಟೀಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು…

1 hour ago

ಮಲೆನಾಡಿಗೆ ತಂಪೆರೆದ ವರುಣ-ಆಲಿಕಲ್ಲು ಮಳೆ

ಜಿಲ್ಲೆಯ ಬಹುತೇಕ ಕಡೆ ಇಂದು ಗುಡುಗು, ಸಿಡಿಲಿನೊಂದಿಗೆ ಆಲಿಕಲ್ಲು ಮಳೆ ಸುರಿದಿದೆ. ಹಲವು ದಿನಗಳಿಂದ ವಿಪರೀತ ತಾಪಮಾನದಿಂದ ಬಸವಳಿದಿದ್ದ ಜನರಿಗೆ…

1 hour ago