News Karnataka Kannada
Wednesday, May 08 2024
ವಿಶೇಷ

‘ಲಿಂಗ ಸಮಾನತೆಯ ಶಕ್ತಿಯನ್ನು ಬಿಚ್ಚಿಡುವುದು’ : ಇಂದು ವಿಶ್ವ ಜನಸಂಖ್ಯಾ ದಿನ

World Population Day
Photo Credit : Freepik

ಜುಲೈ 11 ರಂದು ಪ್ರತಿ ವರ್ಷ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ. 1987 ರ ಜುಲೈ 11 ರಂದು ವಿಶ್ವ ಜನಸಂಖ್ಯೆಯು 500 ಕೋಟಿಯನ್ನು ತಲುಪಿತ್ತು. ಇದರ ಜನಸಂಖ್ಯಾ ಹೆಚ್ಚಳದ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯು, ತನ್ನ ಅಂಗ ಅಂಸ್ಥೆಯಾದ ‘ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ ಮಂಡಳಿ’ಯ ಮೂಲಕ 1989 ಜುಲೈ 11 ರಂದು ಮೊದಲ ಬಾರಿ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.

ಅಂದಿನಿಂದ ಇಚೆಗೆ ಜಗತ್ತಿನಾದ್ಯಂತ 200ಕ್ಕೂ ಹೆಚ್ಚು ದೇಶಗಳಲ್ಲಿ ಈ ದಿನವನ್ನು ಆಚರಿಸಿಕೊಂಡು ಬರಲಾಗುತ್ತದೆ. ಜಗತ್ತಿನ ಜನಸಂಖ್ಯೆ 2019ರಲ್ಲಿ 772 ಕೋಟಿಗೆ ಬಂದು ತಲುಪಿದೆ. ಚೀನಾ 142 ಕೋಟಿ ಜನಸಂಖ್ಯೆ ಮೂಲಕ ಮೊದಲ ಸ್ಥಾನದಲ್ಲಿದ್ದರೆ ಭಾರತ 136.8 ಕೋಟಿ ಜನಸಂಖ್ಯೆ ಹೊಂದುವ ಮೂಲಕ 2ನೇ ಸ್ಥಾನದಲ್ಲಿ ಮುಂದುವರಿದಿದೆ. ಜನಸಂಖ್ಯೆ ಏರಿಕೆಗೆ ಮುಖ್ಯ ಕಾರಣಗಳೆಂದರೆ, ಲಿಂಗ ಅಸಮಾನತೆ, ಬಾಲ್ಯ ವಿವಾಹ ಪದ್ದತಿ, ಆರೋಗ್ಯದ ಹಕ್ಕು, ಮಗುವಿನ ಆರೋಗ್ಯದ ಮೇಲಿನ ಪರಿಣಾಮಗಳು, ಕುಟುಂಬ ಯೋಜನೆ ಇಲ್ಲದೆ ಇರುವುದು ಈ ಎಲ್ಲಾ ಕಾರಣಗಳಿಂದ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚುತ್ತಾಯಿದೆ.

ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು. ಜನಸಂಖ್ಯಾ ಸ್ಫೋಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗೆ ಆದ್ಯತೆ, ಲಿಂಗ ಅಸಮಾನತೆ, ಬಡತನ, ಶಿಶು ಮರಣ, ಮಾನವ ಹಕ್ಕುಗಳು ಮತ್ತಿತರ ಸಂಗತಿಗಳಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶ. ಇದರಿಂದಾಗಿ ಜನಸಂಖ್ಯಾ ಬೆಳವಣಿಗೆಯಲ್ಲಿ ಕುಸಿತ ಕಂಡುಬಂದಿದೆ.

ಭಾರತವು 2027ರ ವೇಳೆಗೆ ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ನಂಬರ್ ಒನ್‌ ಸ್ಥಾನಕ್ಕೆ ಏರಲಿದೆ. ಇದರ ಜೊತೆಗೆ 2050ರ ಅವಧಿಯಲ್ಲಿ ಭಾರತದ ಜನಸಂಖ್ಯೆಗೆ ಹೆಚ್ಚುವರಿಯಾಗಿ 27 ಕೋಟಿ ಜನಸಂಖ್ಯೆ ಸೇರ್ಪಡೆಯಾಗಲಿದೆ. ಪ್ರಸಕ್ತ ಶತಮಾನದ ಅಂತ್ಯಕ್ಕೆ ಅಂದರೆ 2100ನೇ ಇಸವಿಗೆ ವಿಶ್ವದ ಜನಸಂಖ್ಯೆ 1,100 ಕೋಟಿ ತಲುಪಲಿದೆ ಎಂದು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ವಿಭಾಗದ ಅಧ್ಯಯನ ವರದಿ ಹೇಳಿದೆ.

ವಿಶ್ವ ಜನಸಂಖ್ಯಾ ದಿನ 2023ರ ಥೀಮ್
“ಲಿಂಗ ಸಮಾನತೆಯ ಶಕ್ತಿಯನ್ನು ಬಿಚ್ಚಿಡುವುದು” ನಮ್ಮ ಪ್ರಪಂಚದ ಅನಂತ ಸಾಧ್ಯತೆಗಳನ್ನು ಮನ ಬಿಚ್ಚಿ ಮಾತನಾಡುವಂತೆ ಮಾಡಲು ಮಹಿಳೆಯರು ಮತ್ತು ಹುಡುಗಿಯರ ಧ್ವನಿಯನ್ನು ಎತ್ತಿ ಹಿಡಿಯುವುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು