Categories: ವಿಶೇಷ

ಇಂದು ವಿಶ್ವ ಆತ್ಮಹತ್ಯೆ ತಡೆ ದಿನ: ‘ಬದುಕು ತ್ಯಜಿಸುವ ಮುನ್ನ ಕ್ಷಣ ಯೋಚಿಸಿ’

ಪ್ರಪಂಚದಾದ್ಯಂತ ಇತ್ತೀಚೆಗೆ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. ಸಾಮಾನ್ಯ ಸಮಸ್ಯೆಗಳನ್ನೂ ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಹತ್ಯೆ ಎನ್ನುವುದು ವ್ಯಕ್ತಿಗಳು ತಮ್ಮ ಜೀವನವನ್ನು ಕೊನೆಗೊಳಿಸಲು ತೆಗೆದುಕೊಳ್ಳುವ ಒಂದು ಗಂಭೀರ ನಿರ್ಧಾರ. ಆದರೆ ಬದುಕು ತ್ಯಜಿಸುವ ಮುನ್ನ ಕ್ಷಣ ಯೋಚಿಸುವುದು ತುಂಬಾ ಮುಖ್ಯ.  ಪ್ರತಿವರ್ಷ ಸೆಪ್ಟೆಂಬರ್‌ 10 ರಂದು ವಿಶ್ವ ಆತ್ಮಹತ್ಯಾ ತಡೆ ದಿನವನ್ನು ಆಚರಿಸಲಾಗುತ್ತದೆ. ಈ ದಿನ ವಿಶ್ವ ಆತ್ಮಹತ್ಯಾ ತಡೆ ದಿನದ ಆಚರಣೆ ಇದೆ.

ಇತಿಹಾಸ:
ಇಂಟರ್‌ನ್ಯಾಷನಲ್‌ ಅಸೋಸಿಯೇಷನ್‌ ಫಾರ್‌ ಸುಸೈಡ್‌ ವಿಶ್ವ ಆರೋಗ್ಯ ಸಂಸ್ಥೆಯ ಜೊತೆಗೂಡಿ ಪ್ರತಿವರ್ಷ ಸೆಪ್ಟೆಂಬರ್‌ 10 ರಂದು ಆತ್ಮಹತ್ಯೆ ತಡೆಗಟ್ಟುವ ಹಾಗೂ ಈ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲು ಕರೆ ಕೊಟ್ಟಿತ್ತು. 2003ರಲ್ಲಿ ಮೊದಲ ಬಾರಿ ಈ ಆಚರಣೆಗೆ ಚಾಲನೆ ಸಿಕ್ಕಿತು.

‘ಈ ದಿನ ಆತ್ಮಹತ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯಲು ಮತ್ತು ಆತ್ಮಹತ್ಯೆಗಳನ್ನು ತಡೆಗಟ್ಟಲು ಸಾಧ್ಯ ಎಂಬ ಸಂದೇಶವನ್ನು ಪ್ರಸಾರ ಮಾಡಲು ʼಕ್ರಿಯೇಟ್‌ ಹೋಪ್‌ ಥ್ರೂ ಆಕ್ಷನ್‌ʼ ಮೂಲಕ ಪ್ರೋತ್ಸಾಹಿಸುವ ಕೆಲಸವನ್ನು ಮಾಡಲಾಗುತ್ತದೆ.

ಮಹತ್ವ:
ಜನರಲ್ಲಿ ಬದುಕಿನ ಬಗ್ಗೆ ವಿಶ್ವಾಸ ಮೂಡಿಸಿ ಆತ್ಮಹತ್ಯೆಯನ್ನು ತಡೆಯುವುದು ಹಾಗೂ ಆತ್ಮಹತ್ಯೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶ. ಜನರು ತಮ್ಮ ಕೆಟ್ಟ ನಿರ್ಧಾರದಿಂದ ಬದುಕಿಗೆ ಪೂರ್ಣವಿರಾಮ ಹಾಕಲು ಯೋಚಿಸುತ್ತಾರೆ. ಹಾಗಾಗಿ ಅವರಿಗೆ ಸ್ವಾಂತನ ಹೇಳಿ, ಧೈರ್ಯ ತುಂಬಿ, ವಿಶ್ವಾಸ ಮೂಡಿಸುವ ಮೂಲಕ ಆತ್ಮಹತ್ಯೆಯ ಯೋಚನೆಯಿಂದ ದೂರ ಮಾಡಬಹುದು.

ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ, ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿವರ್ಷ 8 ಲಕ್ಷಕ್ಕೂ ಹೆಚ್ಚು ಜನರು ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಸುತ್ತಿದ್ದಾರೆ. ಅದರಲ್ಲೂ ಈ ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ 15 ರಿಂದ 29 ವರ್ಷ ವಯೋಮಾನದ ಯುವಜನರ ಸಂಖ್ಯೆಯೇ ಹೆಚ್ಚು ಎಂದು ವಿಶ್ವ ಸಂಸ್ಥೆ ಹೇಳಿದೆ.

ಭಾರತದಲ್ಲಿ ವಾರ್ಷಿಕವಾಗಿ 1ಲಕ್ಷ ಮಂದಿ ಆತ್ಮಹತ್ಯೆಗೆ ಒಳಗಾಗುತ್ತಿದ್ದು, ದೇಶ ಕೂಡ ಈ ಸಮಸ್ಯೆಯಿಂದ ಬಳಲುತ್ತಿದೆ. 2021ರಲ್ಲಿ ಭಾರತದಲ್ಲಿ ಒಟ್ಟಾರರೆ 1,64,033 ಮಂದಿ ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ 2020ಕ್ಕೆ ಹೋಲಿಕೆ ಮಾಡಿದಾಗ ಇದರ ಸಂಖ್ಯೆ 7.2ರಷ್ಟು ಹೆಚ್ಚಾಗಿದೆ.

Ashitha S

Recent Posts

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

42 seconds ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

12 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

30 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

41 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago