ಗದಗ: ಆಸ್ತಿ ವಿಚಾರಕ್ಕೆ ತಂದೆ ಮಗನ ನಡುವೆ ನಡೆದ ಗಲಾಟೆ ತಂದೆ ಕೊಲೆಯಲ್ಲಿ ಅಂತ್ಯವಾದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಗೋವನಾಳ ಗ್ರಾಮದಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಮಗ ಪೊಲೀಸರಿಗೆ ಶರಣಾಗಿದ್ದಾನೆ.
ಶಂಕರಗೌಡ ದ್ಯಾವನಗೌಡ್ರ (56) ಮೃತ ತಂದೆ.ಪ್ರಭು ಶಂಕರಗೌಡ ದ್ಯಾವನಗೌಡ್ರ (24) ಕೊಲೆ ಮಾಡಿದ ಮಗ. ತಲೆ ಹಾಗೂ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ತಂದೆ, ಮಗ ಇಬ್ಬರು ಕುಡಿದ ಮತ್ತಿನಲ್ಲಿ 2 ಎಕರೆ ಜಮೀನು ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಘಟನೆ ಸ್ಥಳಕ್ಕೆ ಎಸ್ಪಿ ರೋಹನ್ ಜಗದೀಶ, ಡಿವೈಎಸ್ಪಿ ಮುರ್ತುಜಾ ಖಾದ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

