ಗದಗ : ಜಿಲ್ಲಾಧಿಕಾರಿ ಕಚೇರಿಯನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ಅರ್ನಾ ಅಶ್ವಿನ್ ಶೇಖರ್ ಹೆಸರಿಂದ ಇ-ಮೇಲ್ ಬೆದರಿಕೆ ಬಂದಿದೆ.
ಗದಗ ಜಿಲ್ಲಾಡಳಿತದ ಅಧಿಕೃತ ಇಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಅಧಿಕಾರಿಗಳ ಈ ಮೇಲ್ ಗೆ ಸಂದೇಶ ಬಂದಿತ್ತು. ಜಿಲ್ಲಾಧಿಕಾರಿ ಕಚೇರಿಯ ಐದು ಕಡೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಶ್ವಾನ ದಳ, ASC ಟೀಮ್ ದೌಡಾಯಿಸಿದೆ. ಜಿಲ್ಲಾಧಿಕಾರಿಗಳ ಕೊಠಡಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸರ್ಚ್ ಮಾಡಲಾಯಿತು. ಸುಮಾರು ಎರಡು ಗಂಟೆಗಳ ಕಾಲ ಡಿಸಿ ಕಚೇರಿ ಪರಿಶೀಲನೆ ನಡೆಸಲಾಯಿತು. ಹುಸಿಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವ ಬಗ್ಗೆ ಅನುಮಾನ ಸೃಷ್ಟಿಸಿದೆ.

