ಗಾಂಧಿನಗರ

‘ಅಭಿನಯ ಶಾರದೆ’, ಹಿರಿಯ ನಟಿ ಜಯಂತಿ ಇನ್ನಿಲ್ಲ

ಬೆಂಗಳೂರು: ‘ಅಭಿನಯ ಶಾರದೆ’ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಬಹುಭಾಷಾ ಹಿರಿಯ ನಟಿ, ಜಯಂತಿ (76) ನಿಧನರಾಗಿದ್ದಾರೆ.

ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ನಿಧನರಾದರು. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ. ಕನ್ನಡದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಜಯಂತಿಯವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಜಯಂತಿ ಅವರದಾಗಿದೆ.

ಕನ್ನಡ ಚಿತ್ರರಂಗದಲ್ಲೆ ಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು. ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

ಅವರು 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು.

Sampriya YK

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

7 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

25 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

45 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago