25 ಕೋಟಿ ರೂ ನಕಲಿ ಶೂರಿಟಿ ಪ್ರಕರಣಕ್ಕೆ ತೆರೆ ಎಳೆದ ದರ್ಶನ್‌

ಬೆಂಗಳೂರು: ಕಳೆದ ಮೂರು ದಿನಗಳಿಂದ ನಡೆಯುತಿದ್ದ 25 ಕೋಟಿ ರೂಪಾಯಿಯ ಸಾಲದ ನಕಲಿ ಶೂರಿಟಿ ಪ್ರಕರಣಕ್ಕೆ ಕೊನೆಗೂ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೆರೆ ಎಳೆದಿದ್ದಾರೆ. ನಟ ದರ್ಶನ್ ಹೆಸರಲ್ಲಿ ಹಣ ವಂಚನೆ ಯತ್ನ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಆರಂಭದಲ್ಲಿ ನಿರ್ಮಾಪಕ ಉಮಾಪತಿ ಮೇಲೆ ಅನುಮಾನ ಮೂಡಿತ್ತಾದರೂ ನಂತರದ ಬೆಳವಣಿಗೆಯಲ್ಲಿ ಈ ಪ್ರಕರಣದ ಪ್ರಮುಖ ಕೇಂದ್ರಬಿಂದು ಆರೋಪಿ ಅರುಣಾಕುಮಾರಿ ಎನ್ನಲಾಗುತ್ತಿದೆ. ಇದೀಗ ನಟ ದರ್ಶನ್​ ಕೂಡ ‘ಈ ಕೇಸ್​ಗೆ ಈಗಾಗಲೇ ಮಂಗಳ ಹಾಡಿ ಆಗಿದೆ’ ಎನ್ನುವ ಮೂಲಕ ನಿರ್ಮಾಪಕ ಉಮಾಪತಿಯನ್ನು ಬಿಟ್ಟುಕೊಟ್ಟಿಲ್ಲ.
‘ನಿರ್ಮಾಪಕರನ್ನು ನಾನು ಬಿಟ್ಟು ಕೊಡುವುದಿಲ್ಲ. ಉಮಾಪತಿ ಇವತ್ತಿಗೂ ನಮ್ಮ ನಿರ್ಮಾಪಕರೇ. ನಾನು ಉಮಾಪತಿ ಜತೆ ಮಾತನಾಡಿದ್ದೇನೆ. ಇದೇನು ಮಕ್ಕಳ ಆಟವಲ್ಲ…’ ಎನ್ನುವ ಮೂಲಕ ಉಮಾಪತಿ ಪರ ದರ್ಶನ್​ ಮಾತನಾಡಿದ್ದಾರೆ.‘ಇದರಲ್ಲಿ ನಿರ್ಮಾಪಕ ಉಮಾಪತಿಯ ಪಾತ್ರ ಏನೂ ಇಲ್ಲ. ಇದರ ಹಿಂದೆ ಬೇರೆ ಯಾರೋ ಇದ್ದಾರೆ. ಯಾವ ಹೆಣ್ಣು ಮಕ್ಕಳೂ ಇಂಥ ಕೆಲಸ ಮಾಡಲು ಬರಲ್ಲ. ಉಮಾಪತಿಯನ್ನು ಏಕೆ ಟಾರ್ಗೆಟ್ ಮಾಡುತ್ತೀರಿ. ಈ ವಿಷಯದಲ್ಲಿ ಇಲ್ಲಿ ಯಾರೂ ಕೈ ಕಟ್ಟಿ ಕೂತಿಲ್ಲ. ಆ ಮಹಿಳೆಗೆ ಇಷ್ಟೊಂದು ಧೈರ್ಯ ಎಲ್ಲಿಂದ ಬಂತು?’ ಎಂದು ಪ್ರಶ್ನಿಸಿದರು.

Indresh KC

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

10 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

14 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

49 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

1 hour ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 hours ago