ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದೆಹಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ, ಇಮಾನಿ ನವೀನ್ (24) ಬಂಧಿತ ಆರೋಪಿ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ “ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯ ಎಸಗಿದವರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ ಅದು ತಪ್ಪು. ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ. ಹೀಗೆ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಸದ್ಯ ದೆಹಲಿ ಪೊಲೀಸರು ಆಂಧ್ರಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ಆರೋಪಿಯೂ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅಡ್ಮಿನ್ ಆಗಿದ್ದನಂತೆ. ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಡೀಪ್ ಫೇಕ್ ವಿಡಿಯೋ ಸೃಷ್ಟಿ ಮಾಡಿದ್ದಾನಂತೆ.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…