News Karnataka Kannada
Thursday, May 02 2024
ಸಾಂಡಲ್ ವುಡ್

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಟ ಅರ್ಜುನ್ ರಮೇಶ್

Actor Arjun Ramesh is seeking a BJP ticket from Chamarajanagar Lok Sabha constituency.
Photo Credit : By Author

ಚಾಮರಾಜನಗರ: ಈಗಾಗಲೇ ಸ್ಯಾಂಡಲ್ ವುಡ್ ನ ಹಲವು ನಟರು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದು, ಕೆಲವರು ಶಾಸಕ, ಸಂಸದ, ಸಚಿವರಾಗಿ ಕಾರ್ಯನಿರ್ವಹಿಸಿದ್ದರೆ, ಇನ್ನು ಹಲವರು ರಾಜಕೀಯದತ್ತ ಮುಖ ಮಾಡುತ್ತಲೇ ಇದ್ದಾರೆ. ಇದೀಗ ಕನ್ನಡ ಕಿರುತೆರೆಯ ಧಾರವಾಹಿಗಳಾದ “ಅಗ್ನಿಸಾಕ್ಷಿ, “ಇಂತಿ ನಿಮ್ಮ ಆಶಾ” ಮತ್ತು “ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್-1” ಸ್ಪರ್ಧಿ, ನಟ ಅರ್ಜುನ್ ರಮೇಶ್ 2024 ರ ಲೋಕಸಭಾ ಚುನಾವಣೆಯ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಎಸ್ಸಿ ಮೀಸಲು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆ ಚಾಮರಾಜನಗರಕ್ಕೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ 12 ವರ್ಷಗಳಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿದ್ದೇನೆ. ತಿ.ನರಸೀಪುರ ಪುರಸಭಾ ಸದಸ್ಯನಾಗಿ ಅತ್ಯಧಿಕ ಮತಗಳಿಂದ ಆಯ್ಕೆಯಾಗಿದ್ದೇನೆ. ನನ್ನ ತಂದೆ ಮಾಜಿ ವಿಧಾನಪರಿಷತ್ ಸದಸ್ಯ ಸಿ.ರಮೇಶ್. ಕಳೆದ 20 ವರ್ಷಗಳಿಂದ ಪಕ್ಷದ ಸಂಘಟನೆಗೆ ದುಡಿಯುತ್ತಿದ್ದಾರೆ. ಪಕ್ಷ ನನಗೆ ಈ ಬಾರಿ ಅವಕಾಶ ಮಾಡಿಕೊಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಲಿ ಬಿಡಲಿ ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು