News Karnataka Kannada
Friday, May 03 2024
ಸಾಂಡಲ್ ವುಡ್

ನೇಹಾ ಹಿರೇಮಠ್ ಹತ್ಯೆ: ಆಕ್ರೋಶ ವ್ಯಕ್ತಪಡಿಸಿದ ನಟ ಧ್ರುವ ಸರ್ಜಾ

ನೇಹಾ ಹಿರೇಮಠ್ ಅವರ ಹತ್ಯೆಗೆ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು ಈಗ ಚಿತ್ರರಂಗದ ನಟರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 
Photo Credit : NewsKarnataka

ಬೆಂಗಳೂರು: ನೇಹಾ ಹಿರೇಮಠ್ ಅವರ ಹತ್ಯೆಗೆ ಈಗಾಗಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು ಈಗ ಚಿತ್ರರಂಗದ ನಟರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ನಟ ಧ್ರುವ ಸರ್ಜಾ  ಅವರು ‘ಎಕ್ಸ್​’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ. ಆ ಮೂಲಕ ಅವರು ನೇಹಾ ಹಿರೇಮಠ್​  ಸಾವಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತಿದ್ದಾರೆ.

‘ಸಹೋದರಿ ನೇಹಾ ಹಿರೇಮಠ್ ಅವರ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್​ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಇದನ್ನು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ’ ಎಂದು ಧ್ರುವ ಸರ್ಜಾ   ‘ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಘಟನೆಯ ಕುರಿತಂತೆ ಧ್ರುವ ಸರ್ಜಾ ಪೋಸ್ಟ್​ ಮಾಡಿರುವುದಕ್ಕೆ ಅಭಿಮಾನಿಗಳು ಪ್ರಶಂಸೆ ಸೂಚಿಸಿದ್ದಾರೆ.

‘ತಮ್ಮ ಸಾಮಾಜಿಕ ಕಾಳಜಿಗೆ ಧನ್ಯವಾದಗಳು. ಅಪರಾಧಿಗೆ ಇನ್ನೂ ಜೀವಂತವಾಗಿ ಇಟ್ಟಿರುವುದೇ ಒಂದು ವಿಪರ್ಯಾಸ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ಕೊಲೆ ಮಾಡಿದ್ದಕ್ಕೆ ವಿಡಿಯೋ ಇದೆ. ಸಾಕ್ಷಿ ಇನ್ನೇನು ಬೇಕು’ ಎಂದು ‘ಎಕ್ಸ್​’ ಬಳಕೆದಾರರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು