ಬೆಂಗಳೂರು: ಹಿಂದುತ್ವದ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ಕೆಟ್ಟದಾಗಿ ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಹಿಂದು ಸಂಘಟನೆಗಳು ಬೆಂಗಳೂರಿನ ಶೇಷಾದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ನಟನನ್ನು ಬಂಧಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಚೇತನ್ ಅವರ ವಿರುದ್ಧ ಐಪಿಸಿ ಸೆಕ್ಷನ್ 295ಎ, 505ಬಿ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ.
ಚೇತನ್ ಮಾಡಿದ ವಿವಾದಿತ ಟ್ವೀಟ್ ಹೀಗಿದೆ.
‘ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಪ್ರಾರಂಭವಾಯಿತು ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ ಇದು ಒಂದು ಸುಳ್ಳು. ಈಗ 2023ರಲ್ಲಿ: ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು- ಇದು ಕೂಡ ಒಂದು ಸುಳ್ಳು’ ಎಂದು ಟ್ವೀಟ್ ಮಾಡಿದ್ದರು.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) March 20, 2023