News Karnataka Kannada
Saturday, May 18 2024
ಗಾಂಧಿನಗರ

ರಗಡ್ ಲುಕ್‌ ನಲ್ಲಿ ಕಾಣಿಸಿಕೊಂಡ ಅಗ್ನಿಸಾಕ್ಷಿ ಸಿದ್ದಾರ್ಥ್

Agnisakshi Siddharth in a rugged look
Photo Credit : News Kannada

ಬೆಂಗಳೂರು: ‘ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಜನಪ್ರಿಯತೆ ಗಳಿಸಿರುವ ವಿಜಯ್ ಸೂರ್ಯ ಈಗ ‘ವೀರಪುತ್ರ’ ಆಗಿದ್ದಾರೆ. ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸುತ್ತಿರುವ ಹೊಸ ಸಿನಿಮಾ ‘ವೀರಪುತ್ರ’ದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ವಿಜಯ್ ಸೂರ್ಯ ಈ ಸಿನಿಮಾದಲ್ಲಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಉದ್ದ ಕೂದಲು ಬಿಟ್ಟು, ರಡಗ್ ಆಗಿ ಕಾಣಿಸಿಕೊಂಡಿದ್ದಾರೆ.

ಡಾ.ದೇವರಾಜ್.ಎಸ್ ಅವರು ‘ವೀರಪುತ್ರ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ದೇವರಾಜ್ ಅವರಿಗೆ ಇದು ಎರಡನೇ ಸಿನಿಮಾ. ಈ ಹಿಂದೆ ‘ಸಪ್ಲಿಮೆಂಟರಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು. ‘ವೀರಪುತ್ರ’ ಸಿನಿಮಾವು ಮೆಡಿಕಲ್ ಮಾಫಿಯಾ ಹಾಗೂ ಫ್ಯಾಮಿಲಿ ರಿವೇಂಜ್ ಕತೆಯನ್ನು ಒಳಗೊಂಡಿದೆ. ಸಿನಿಮಾವನ್ನು ನಿರ್ದೇಶನ ಮಾಡುತ್ತಿರುವ ದೇವರಾಜ್ ಕಥೆ, ಚಿತ್ರಕಥೆ ಜವಾಬ್ದಾರಿ ಹೊತ್ತಿದ್ದಾರೆ. ‘ಸಂಪ್ಲಿಮೆಂಟರಿ’, ‘ಧೀರಸಾಮ್ರಾಟ್’ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಗುರು ಬಂಡಿ ಅವರೇ ಈ ಸಿನಿಮಾಖ್ಕೂ ಬಂಡವಾಳ ಹೂಡಿದ್ದಾರೆ.
ವಿಜಯ್ ಸೂರ್ಯ ಅವರಿಗೆ ಎದುರಾಗಿ ನಾಯಕಿಯಾಗಿ ಲೇಖಚಂದ್ರ ನಟಿಸುತ್ತಿದ್ದಾರೆ. ಹಿರಿಯ ನಟಿಯಾದ ಉಮಾಶ್ರೀ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು