ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ಸ್ಪರ್ಧೆಯಲ್ಲಿ ಹಲವು ವಿವಾದಗಳು ಎದುರಾಗಿತ್ತು. ಈ ಮೊದಲು ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ಜೈಲು ಸೇರಿ ವಾಪಸ್ ಬಂದಿದ್ದರು. ಇದೀಗ ಬಿಗ್ಬಾಸ್ ಕನ್ನಡ ಸೀಸನ್ 10ರ ಮತ್ತೊಬ್ಬ ಸ್ಪರ್ಧಿಯ ವಿರುದ್ಧ ದೂರು ದಾಖಲಾಗಿದೆ. ವರ್ತೂರು ಸಂತೋಷ್ ಜೊತೆ ಬಿಗ್ಬಾಸ್ ಮನೆಯಲ್ಲಿ ಆತ್ಮೀಯವಾಗಿರುವ ತನಿಷಾ ಕುಪ್ಪಂಡ ಅವರು ವಿವಾದಕ್ಕೆ ಸಿಲುಕಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತನಿಷಾ, ವಡ್ಡ ಎಂಬ ಪದ ಬಳಸೂವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ಸ್ವೀಕರಿಸಿರುವ ಕುಂಬಳಗೋಡು ಪೊಲೀಸ್ ಠಾಣೆ ಸಿಬ್ಬಂದಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.