News Karnataka Kannada
Thursday, May 09 2024
ಸಾಂಡಲ್ ವುಡ್

ಬೆಂಗಳೂರು: ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Chief Minister Basavaraj Bommai announces tax exemption for gandhada gudi
Photo Credit : News Kannada

ಬೆಂಗಳೂರು: ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು, ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ‘ಗಂಧದ ಗುಡಿ’ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯಿತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.

ಅವರು ಇಂದು ಪುನೀತ್ ಪರ್ವ , ಗಂಧದ ಗುಡಿ ಪ್ರಿ ರಿಲೀಸ್ ಕಾರ್ಯಕ್ರಮದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದರು.

ಅಪ್ಪು ಜನಮಾನಸದಲ್ಲಿ ಜೀವಂತವಾಗಿದ್ದಾರೆ :

ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾರೆ ಎಂಬ ಭಾವನೆ ನಮ್ಮಲ್ಲಿದೆ. ನಾನು ಕರ್ನಾಟಕದ ಉದ್ದಗಲಕ್ಕೂ ಕೊಳ್ಳೇಗಾಲದಿಂದ ಹಿಡಿದು ಬೀದರ್ ವರೆಗೂ ಪ್ರತಿಯೊಂದು ಗ್ರಾಮದಲ್ಲಿ ಅಪ್ಪುವಿನ ಛಾಯಾಚಿತ್ರ, ನಮನ, ಯುವಕರಲ್ಲಿ ಅಪ್ಪುವಿನ ಬಗ್ಗೆ ಪ್ರೀತಿ ವಿಶ್ವಾಸ ನೋಡಿದಾಗ, ಕೆಲವೊಮ್ಮೆ ವಿಸ್ಮಿತನಾಗುತ್ತೇನೆ. ಅಂತಹ ವ್ಯಕ್ತಿತ್ವಕ್ಕೆ ದೇವರ ಆಶೀರ್ವಾದವಿದೆ. ಅಪ್ಪುರವರು ಇನ್ನೂ ಬಹಳ ವರ್ಷ ಬಾಳಬೇಕಾಗಿದ್ದವರು. ಅತ್ಯಂತ ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಅಗಲಿದ್ದಾರೆ. ಅಪ್ಪು ಬಗ್ಗೆ ಎರಡು ವಿಶೇಷತೆ ಇದೆ. ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಾಲಕಲಾವಿದರಾಗಿ ಖ್ಯಾತಿಯಾಗಿದ್ದಾರೆ. ಆದರೂ ಅವರ ಕೆಲಸಗಳು, ಆದರ್ಶಗಳು ಮತ್ತು ಅವರ ನಟನೆ ಮಾಡಿದ ಚಿತ್ರಗಳ ಮೂಲಕ ಅಪ್ಪು ಜನಮಾನಸದಲ್ಲಿ ಇಂದಿಗೂ ಜೀವಂತವಾಗಿದ್ದಾರೆ ಎಂದರು.

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ರತ್ನ ಪ್ರಶಸ್ತಿ :

ನವೆಂಬರ್ 1 ರಂದು ಅಪ್ಪುರವರಿಗೆ ಕರ್ನಾಟಕ ಶ್ರೇಷ್ಟ ಪ್ರಶಸ್ತಿಯಾಗಿರುವ ‘ಕರ್ನಾಟಕ ಪ್ರಶಸ್ತಿಯನ್ನು’ ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ. ಇದು ಎಲ್ಲ ಯುವಕರಿಗೂ ಪ್ರೇರಣೆಯಾಗುವಂತಹ ಒಂದು ಗೌರವ ಎಂದು ಭಾವಿಸುತ್ತೇನೆ. ಗಂಧದ ಗುಡಿ ಚಲನಚಿತ್ರ ಅತ್ಯಂತ ಯಶಸ್ವಿಯಾಗಲಿ. ಅದೇ ರೀತಿ ಪುನೀತ್ ಪರ್ವ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ. ಸುಮಾರು ಹತ್ತು ದಿನಗಳ ಕಾಲ ನಡೆಯುವ ಕರ್ನಾಟಕ ರತ್ನ ಸಮಾರಂಭದ ಸಂಭ್ರಮವೂ ಕೂಡ ಯಶಸ್ವಿಯಾಗಲಿ. ಈ ಕಾರ್ಯಕ್ರಮದ ಮೂಲಕ ಅಪ್ಪುವಿನ ಮೇಲಿನ ನಮ್ಮ ಪ್ರೀತಿ, ವಾತ್ಸಲ್ಯವನ್ನು ಸಮಸ್ತ ಕನ್ನಡ ನಾಡು ತೋರಿಸಿದಂತಾಗುತ್ತದೆ ಎನ್ನುವ ಭಾವನೆ ನನಗಿದೆ ಎಂದರು.

ನಮ್ಮ ಅಪ್ಪು ಎಲ್ಲ ರಿಗೂ ಅತ್ಯಂತ ಪ್ರಿಯವಾಗಿರುವ ಡಾ.ಪುನೀತ್ ರಾಜಕುಮಾರ್ ಅವರ ಪ್ರಯೋಗ, ನಿಸರ್ಗ, ಕಾಡು, ಪ್ರಾಣಿಗಳು ಮದ್ಯೆ ನಡೆದಿರುವಂತಹ ಒಂದು ಸಿನೆಮಾ. ಇಂದು ಗಂಧದ ಗುಡಿ ಚಲನಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಪುನೀತ್ ಪರ್ವ ಆಚರಣೆ ಯನ್ನು ನಾವೆಲ್ಲರೂ ಸೇರಿ ಆಚರಿಸುತ್ತಿದ್ದೇವೆ. ಈ ಕಾರ್ಯಕ್ರಮ ದಲ್ಲಿ ಭಾಗವಹಿಸಲು ನನಗೆ ಸಂತೋಷವಾಗಿದೆ. ಅಪ್ಪುವನ್ನು ಕಳೆದುಕೊಂಡು ಒಂದು ವರ್ಷವಾಗಿದೆ. ಅಪ್ಪು ನಮ್ಮ ಜೊತೆಗೆ ಇದ್ದಾನೆ ಎಂಬ ಭಾವನೆ ನಮ್ಮಲ್ಲಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು