ಬೆಂಗಳೂರು: ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗವಹಿಸುವ ಸಾಧ್ಯತೆ ಇದೆ. ಖಾಸಗಿ ಹೋಟೆಲ್ನಲ್ಲಿ ಈ ಪ್ರೆಸ್ಮೀಟ್ ನಡೆಯಲಿದೆ. ಸುದ್ದಿಗೋಷ್ಠಿ ವೇಳೆ ಸುದೀಪ್ ಅವರು ಬಿಜೆಪಿಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಸುದೀಪ್ ಅವರನ್ನು ಬಿಜೆಪಿಗೆ ಕರೆತರಲು ಈ ಹಿಂದೆಯು ಪ್ರಯತ್ನ ನಡೆದಿತ್ತು. ಆದರೆ ಫಲನೀಡಿರಲಿಲ್ಲ. ಈಗ ಇಂತಹ ಪ್ರಯತ್ನಕ್ಕೆ ಬಲ ದೊರೆತಿದೆ.
ಸುದೀಪ್ ಅವರು ಬೊಮ್ಮಾಯಿ ಅವರೊಂದಿಗೆ ಆತ್ಮೀಯತೆ ಹೊಂದಿದ್ದು ಈ ನಿಟ್ಟಿನಲ್ಲಿ ಸುದೀಪ್ ಪಕ್ಷ ಸೇರ್ಪಡೆಯಾಗದಿದ್ದರೂ ಸ್ಟಾರ್ ಪ್ರಚಾರಕರಾಗಿ ಭಾಗವಹಿಸುತ್ತಾರೆ ಎನ್ನಲಾಗಿದೆ.
ಸುದೀಪ್ ಅವರು ಬಿಜೆಪಿ ಪ್ರಚಾರ ರಾಯಭಾರಿ ಆದರೆ ಪಕ್ಷಕ್ಕೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ. ಬಿಜೆಪಿ ಪಕ್ಷದ ಪರ ಅವರ ಅಭಿಮಾನಿಗಳು ಪ್ರಚಾರ ಮಾಡಲಿದ್ದಾರೆ. ಸುದೀಪ್ಗೆ ದೊಡ್ಡ ಅಭಿಮಾನಿ ವರ್ಗ ಇದೆ. ಅವರು ಪಕ್ಷದ ಪರ ಪ್ರಚಾರ ಮಾಡಿದರೆ ದೊಡ್ಡ ಬಲ ಸಿಕ್ಕಂತೆ ಆಗಲಿದೆ ಅನ್ನೋದು ಬಿಜೆಪಿ ಆಲೋಚನೆ. ಈ ಕಾರಣಕ್ಕೆ ಸುದೀಪ್ಗೆ ಆಫರ್ ನೀಡಲಾಗಿತ್ತು. ಅವರು ಕಮಲದ ಪರ ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.