ಬೆಂಗಳೂರು: ವರನಟ ಡಾ.ರಾಜ್ಕುಮಾರ್ ದೈಹಿಕವಾಗಿ ನಮ್ಮೊಂದಿಗಿರುತ್ತಿದ್ದರೆ ಇಂದು (ಏಪ್ರಿಲ್ 24) ಅವರು 95ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರ ಅಭಿಮಾನಿಗಳು ರಾಜ್ಕುಮಾರ್ ಅವರ ಹುಟ್ಟುಹಬ್ಬವನ್ನು ಪ್ರತಿ ವರ್ಷ ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಾ ಬಂದಿದ್ದಾರೆ.
ಈ ಬಾರಿಯೂ 95ನೇ ಹುಟ್ಟುಹಬ್ಬವನ್ನು ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ಅವರ ಕುಟುಂಬ ವರ್ಗ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಲಿದೆ. ಜೊತೆಗೆ ಸಾಕಷ್ಟು ಸಂಖ್ಯೆಯ ಅಭಿಮಾನಿ ಗಳು ಕೂಡಾ ಅಣ್ಣಾವ್ರ ಹುಟ್ಟುಹಬ್ಬ ಆಚರಿಸಲಿದ್ದಾರೆ. ಜೊತೆಗೆ ನೇತ್ರದಾನ, ರಕ್ತದಾನದಂತಹ ಸಾಮಾಜಿಕ ಕಾರ್ಯಗಳು ಕೂಡಾ ನಡೆಯಲಿದೆ.